Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ : ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ

03/02/2026 6:01 AM

GOOD NEWS : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ : ಈಗ ಅರ್ಜಿ ಹಾಕಿದ್ರೂ ಹಣ ಕೊಡ್ತೀವಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

03/02/2026 5:52 AM

BIG NEWS : ರಾಜ್ಯದ 3862 ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‌ರೂಂಗೆ ಅನುಮತಿ ನೀಡಿದ ಸರ್ಕಾರ

03/02/2026 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB FAIR : ಇಂದು ಚಿತ್ರದುರ್ಗದಲ್ಲಿ ‘ಉದ್ಯೋಗ ಮೇಳ’ : 50 ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯ.!
KARNATAKA

JOB FAIR : ಇಂದು ಚಿತ್ರದುರ್ಗದಲ್ಲಿ ‘ಉದ್ಯೋಗ ಮೇಳ’ : 50 ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯ.!

By kannadanewsnow5701/03/2025 5:38 AM

ಚಿತ್ರದುರ್ಗ : ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಮಾ. 01 ರಂದು ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸುಮಾರು 50 ಕ್ಕೂ ಹೆಚ್ಚು ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯವಿದೆ.

ಹಲವಾರು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ನೀಡಲು ಸಮ್ಮತಿಸಿ ನೊಂದಣಿ ಮಾಡಿಕೊಂಡಿವೆ. ಈ ಪೈಕಿ ಕಿರ್ಲೋಸ್ಕರ್, ಎಲ್ ಅಂಡ್ ಟಿ, ನಂತಹ ಬೃಹತ್ ಕಂಪನಿಗಳು ಸೇರಿದಂತೆ ಫೈನಾನ್ಸ್, ಐಟಿ ಕಂಪನಿಗಳು, ಮೊಬೈಲ್ ಕಂಪನಿಗಳು, ಫರ್ಟಿಲೈಜರ್, ಆಟೋಮೊಬೈಲ್, ಗಾರ್ಮೆಂಟ್ಸ್, ಫಾರ್ಮ ಕಂಪನಿಗಳು ಪ್ರಮುಖವಾಗಿವೆ. ಈ ಎಲ್ಲ ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯವಿದ್ದು, ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಲು ಸುವರ್ಣಾವಕಾಶ ಒದಗಿಬಂದಿದೆ.

ಈಗಾಗಲೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ನೊಂದಣಿ ಕಾರ್ಯ ಕೂಡ ಅತ್ಯಂತ ಸರಳವಾಗಿದೆ. ಮೊಬೈಲ್‌ನಲ್ಲಿ, ಕಂಪ್ಯೂಟರ್‌ನಲ್ಲಿ https://forms.gle/7pTxbGPVKAFCSYaX7 ಈ ಲಿಂಕ್ ಕ್ಲಿಕ್ ಮಾಡಿದ ಬಳಿಕ ತೆರೆಯುವ ಗೂಗಲ್ ಫಾರ್ಮ್ ನಲ್ಲಿ ಅಭ್ಯರ್ಥಿಗಳು ತಮ್ಮ ಹೆಸರು, ವಿದ್ಯಾರ್ಹತೆ, ವಿಳಾಸ ಮುಂತಾದ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ, ಸಬ್‌ಮಿಟ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನೊಂದಣಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಅದೇ ರೀತಿ ಚಿತ್ರದುರ್ಗ ಜಿಲ್ಲೆಯ ಅಧಿಕೃತ ಸರ್ಕಾರಿ ವೆಬ್‌ಸೈಟ್ https://chitradurga.nic.in/ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಳ್ಳದೆ, ನೇರವಾಗಿ ಉದ್ಯೋಗ ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳಿಗೂ ಕೂಡ ಉದ್ಯೋಗ ಮೇಳ ಜರುಗುವ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಮಾ. 01 ರಂದು ಬೆಳಿಗ್ಗೆ 09 ಗಂಟೆಯಿAದಲೇ ನೋಂದಣಿ ಮಾಡಿಕೊಳ್ಳಲು 5 ಕೌಂಟರ್ ಅನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನೇರವಾಗಿ ಪಾಲ್ಗೊಳ್ಳಲು ಆಗಮಿಸುವ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳನ್ನು ನೀಡಿ ಕೌಂಟರ್‌ಗಳಲ್ಲಿ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಂಡವರಿಗೆ, ನೇರವಾಗಿ ಕಂಪನಿಗಳಲ್ಲಿ ಸಂದರ್ಶನಕ್ಕೆ ಅವಕಾಶ ದೊರೆಯಲಿದೆ. ಹೀಗಾಗಿ ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಳ್ಳುವುದು ಸೂಕ್ತ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮೋ ಹಾಗೂ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿದಂತೆ ಎಲ್ಲಾ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೂ ಉದ್ಯೋಗ ಮೇಳದಲ್ಲಿ ಉದ್ಯೋಗಗಳು ಲಭ್ಯವಿದ್ದು, ಉದ್ಯೋಗ ಆಸಕ್ತ ಯುವಕ, ಯುವತಿಯರು ಭಾಗವಹಿಸಿ, ಉದ್ಯೋಗ ಪಡೆಯಬಹುದು.

ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ಡಿಪ್ಲೋಮಾ, ಪದವಿ ಪಡೆದಿರುವ ಸುಮಾರು 4300 ಕ್ಕೂ ಹೆಚ್ಚು ಯುವಕ, ಯುವತಿಯರು ನಿರುದ್ಯೋಗ ಭತ್ಯೆ ಪಡೆಯುತ್ತಿದ್ದು, ಎಲ್ಲ ಅಭ್ಯರ್ಥಿಗಳು ಕೂಡ ಈ ಉದ್ಯೋಗಮೇಳದಲ್ಲಿ ಪಾಲ್ಗೊಳ್ಳಲು ಜಿಲ್ಲಾಡಳಿತ ವಿಶೇಷ ಆಹ್ವಾನ ನೀಡುತ್ತಿದ್ದು, ಈ ಯೋಜನೆಯ ಅಭ್ಯರ್ಥಿಗಳು ಕೂಡಲೆ ನೊಂದಣಿ ಮಾಡಿಕೊಂಡು, ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ನೀಡುವ ಸಲುವಾಗಿ ಈಗಾಗಲೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕಸ ವಿಲೇವಾರಿ ವಾಹನಗಳಲ್ಲಿನ ಧ್ವನಿವರ್ಧಕದ ಮೂಲಕ ಉದ್ಯೋಗ ಮೇಳದ ಕುರಿತು ಜಿಂಗಲ್ಸ್ ಹಾಗೂ ಸಂದೇಶ ನೀಡುವ ಮೂಲಕ ಪ್ರಚಾರವನ್ನು ಸಹ ಕೈಗೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ಗೋವಿಂದ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಧ್ಯಕ್ಷತೆ ವಹಿಸುವ ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಬಿ.ಜಿ. ಗೋವಿಂದಪ್ಪ, ಟಿ. ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ, ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ ನಾಯಕ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತಾ ರಾಘವೇಂದ್ರ ಸೇರಿದಂತೆ ವಿವಿಧ ಗಣ್ಯರು, ಉನ್ನತ ಅಧಿಕಾರಿಗಳು ಭಾಗವಹಿಸುವರು.

No photo description available.

JOB FAIR: 'Job Fair' in Chitradurga today: More than 5000 jobs available in 50 companies!
Share. Facebook Twitter LinkedIn WhatsApp Email

Related Posts

ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ : ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ

03/02/2026 6:01 AM2 Mins Read

GOOD NEWS : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ : ಈಗ ಅರ್ಜಿ ಹಾಕಿದ್ರೂ ಹಣ ಕೊಡ್ತೀವಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

03/02/2026 5:52 AM1 Min Read

BIG NEWS : ರಾಜ್ಯದ 3862 ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‌ರೂಂಗೆ ಅನುಮತಿ ನೀಡಿದ ಸರ್ಕಾರ

03/02/2026 5:45 AM1 Min Read
Recent News

ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ : ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ

03/02/2026 6:01 AM

GOOD NEWS : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ : ಈಗ ಅರ್ಜಿ ಹಾಕಿದ್ರೂ ಹಣ ಕೊಡ್ತೀವಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

03/02/2026 5:52 AM

BIG NEWS : ರಾಜ್ಯದ 3862 ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‌ರೂಂಗೆ ಅನುಮತಿ ನೀಡಿದ ಸರ್ಕಾರ

03/02/2026 5:45 AM

BREAKING : ಮತ್ತೆ ನಿಫಾ ವೈರಸ್ ಕಾಟ : ರಾಜ್ಯದಲ್ಲಿ ಹೈ ಅಲರ್ಟ್​ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

03/02/2026 5:32 AM
State News
KARNATAKA

ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ : ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ

By kannadanewsnow0503/02/2026 6:01 AM KARNATAKA 2 Mins Read

ಬೆಂಗಳೂರು : ಕರ್ನಾಟಕ ಸರ್ಕಾರ ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು…

GOOD NEWS : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ : ಈಗ ಅರ್ಜಿ ಹಾಕಿದ್ರೂ ಹಣ ಕೊಡ್ತೀವಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

03/02/2026 5:52 AM

BIG NEWS : ರಾಜ್ಯದ 3862 ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‌ರೂಂಗೆ ಅನುಮತಿ ನೀಡಿದ ಸರ್ಕಾರ

03/02/2026 5:45 AM

BREAKING : ಮತ್ತೆ ನಿಫಾ ವೈರಸ್ ಕಾಟ : ರಾಜ್ಯದಲ್ಲಿ ಹೈ ಅಲರ್ಟ್​ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

03/02/2026 5:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.