ಕೊಪ್ಪಳ : ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ ವೇಳೆ ಅಧಿಕಾರಿಗಳ ಮೇಲೆಯೇ ದಂಧೆ ಕೋರರು ಹಲ್ಲೆ ಮಾಡಿದ ಘಟನೆ ಕೊಪ್ಪಳ ತಾಲೂಕಿನ ಚಿಕ್ಕ ಸಿಂದೋಗಿ ಸಮೀಪದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಹಲ್ಲೆಗೊಳಗಾದ ಸಿಬ್ಬಂದಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಿಬ್ಬಂದಿ ಸಚಿನ್ ಗೌರಿಪುರ ಎಂದು ತಿಳಿದು ಬಂದಿದೆ.ಟ್ಯಾಕ್ಟರ್ ನಲ್ಲಿ ಮರಳು ಸಾಗಿಸುತ್ತಿದ್ದ ಚಾಲಕನನ್ನು ತಡೆದ ಇಲಾಖೆ ಸಿಬ್ಬಂದಿಗಳು ಮರಳು ತುಂಬಿದ ಟ್ರಾಕ್ಟರ್ ಅನ್ಲೋಡ್ ಮಾಡಲು ಹೇಳಿದಾಗ ಸ್ಥಳದಲ್ಲಿ ಮರಳು ತುಂಬುತ್ತಿದ್ದ ಎಂಟು ಜನರು ಏಕಾಏಕಿ ಇಲಾಖೆಯ ಚಾಲಕ ಸಚಿನ್ ಗೌರಿಪುರ ಎನ್ನುವ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ.
ಈ ಸಿಬ್ಬಂದಿ ಸೇರಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂವರು ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಚಿಕ್ಕ ಸಿಂದೋಗಿ ಸಮೀಪದ ಹಿರೇಹಳ್ಳದಲ್ಲಿ ನಡೆಯುತ್ತಿದ್ದ ಅಕ್ರಮಣ ಮರಳು ಗಾಣಿಗಾರಿಕೆಯ ಸ್ಥಳಕ್ಕೆ ತೆರಳಿ ಅಕ್ರಮ ಗಣಿಗಾರಿಕೆ ತಡೆಯುವ ಯತ್ನ ನಡೆಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಎಂಟು ಜನರ ತಂಡವು ಇಲಾಖೆಯ ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದಾರೆ.
ಇದರಿಂದ ತೀವ್ರ ಅಸ್ವಸ್ಥಗೊಂಡ ಸಿಬ್ಬಂದಿ ಸಚಿನ್ ನನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆಯಾದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ರಶೀದ್ ಅವರು ತಾಲೂಕಿನ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.