ಬೆಂಗಳೂರು : ಬೆಳಗಾವಿಯಲ್ಲಿ KSRTC ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಹಲವು ದಿನಗಳಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವೆ KSRTC ಬಸ್ ಸಂಚಾರ ಸ್ಥಗಿತಗೊಂಡಿತು. ಇದೀಗ ಪರಿಸ್ಥಿತಿ ತಿಳಿಗೊಂಡ ನಂತರ ಮತ್ತೆ ಮಹಾರಾಷ್ಟ್ರಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪುನ ಆರಂಭವಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪುನಾರಂಭವಾಗಿದೆ.ಕಂಡಕ್ಟರ್ ವಿರುದ್ಧ ದಾಖಲಿಸಿದ ಪೋಕ್ಸೋ ಕೇಸ್ ಹಿಂಪಡೆದಿದ್ದಾರೆ. ದೂರು ನೀಡಿದವರಿಗೆ ಒಳ್ಳೆಯ ಬುದ್ಧಿ ಬಂದಿದೆ ಹಾಗಾಗಿ ಕೇಸ್ ಪಡೆದಿದ್ದಾರೆ.ಅದೇ ರೀತಿಯಾಗಿ ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯುತ್ತದೆ. ಮೇ ತಿಂಗಳಲ್ಲಿ 100% ಬಿಬಿಎಂಪಿ ಚುನಾವಣೆ ನಡೆಯುವುದು ನಿಶ್ಚಿತ ಎಂದು ಇದೆ ವೇಳೆ ಸಚಿವರು ತಿಳಿಸಿದರು.