ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲು ಕ್ರಮವಹಿಸಲಾಗುತ್ತದೆ ಎಂದು ವಿಜ್ಞಾನ ಮ್ತತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಸಾಲಿನಲ್ಲಿ 4 ಜಿಲ್ಲೆಗಳಲ್ಲಿ ಸ್ಥಾಪಿಸುವ ಗುರಿ ಹೊಂದಿದ್ದೇವೆ. 800ಕ್ಕೂ ಅಧಿಕ ಶಾಲೆಗಳಿಗೆ ಟೆಲಿಸ್ಕೋಪ್ ಕೊಡುವ ಯೋಜನೆ ಇದೆ. ವಿಜ್ಞಾನ ನಗರ ಸ್ಥಾಪನೆಗೆ ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದ್ದು, ದೇವನಹಳ್ಳಿ ಬಳಿ 30… pic.twitter.com/WCNhfZqcdk
— DIPR Karnataka (@KarnatakaVarthe) March 1, 2025
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಸಾಲಿನಲ್ಲಿ 4 ಜಿಲ್ಲೆಗಳಲ್ಲಿ ಸ್ಥಾಪಿಸುವ ಗುರಿ ಹೊಂದಿದ್ದೇವೆ. 800ಕ್ಕೂ ಅಧಿಕ ಶಾಲೆಗಳಿಗೆ ಟೆಲಿಸ್ಕೋಪ್ ಕೊಡುವ ಯೋಜನೆ ಇದೆ. ವಿಜ್ಞಾನ ನಗರ ಸ್ಥಾಪನೆಗೆ ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದ್ದು, ದೇವನಹಳ್ಳಿ ಬಳಿ 30 ಎಕರೆ ಜಾಗ ಗುರುತಿಸಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ದೇಶ ಹಾಗೂ ರಾಜ್ಯಗಳ ಪ್ರಗತಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರವಾಗಿದೆ. ಪ್ರತಿವರ್ಷ ಫೆಬ್ರವರಿ 28 ರಂದು ಸರ್ ಸಿ.ವಿ ರಾಮನ್ ಅವರ “ರಾಮನ್ ಪರಿಣಾಮ” ಆವಿಷ್ಕಾರದ ಸ್ಮರಣಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿಜ್ಞಾನವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ದು – ಜನರನ್ನು ವಿಜ್ಞಾನದ ಕಡೆಗೆ ಕರೆದೊಯ್ಯುವುದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ದೂರದೃಷ್ಟಿಯಾಗಿದೆ. ಕಳೆದ ಎರಡು ವರ್ಷಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮೂಲಕ ಸೃಜನಶೀಲತೆ, ಸುಸ್ಥಿರತೆ ಮತ್ತು ವೈಜ್ಞಾನಿಕತೆಯನ್ನು ಸಾರುವಂತಹ ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.
ಕರ್ನಾಟಕ ರಾಜ್ಯವನ್ನು ಸಂಶೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದಕ್ಕೆ ನಮ್ಮ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಬಹಳಷ್ಟು ಸಹಕಾರ ನೀಡುತ್ತಿದ್ದಾರೆ. ಸಂಶೋದನೆ ಮತ್ತು ಅಭಿವೃದ್ದಿಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ರಿಸರ್ಚ್ ಫೌಂಡೇಶನ್ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಖಗೋಳಶಾಸ್ತ್ರದ ಬಗ್ಗೆ ಆಸಕ್ತಿ ಬೆಳೆಸಲು ಕಳೆದ ಬಜೆಟ್‌ನಲ್ಲಿ ಟೆಲಿಸ್ಕೋಪ್ ವಿತರಿಸಲು ಅಗತ್ಯ ಅನುದಾನ ನೀಡಲಾಗಿತ್ತು. ಇಂದು ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ಕೂಡಾ ಹಸ್ತಾಂತರಿಸಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಕಲಿಯುವ ನಿಟ್ಟಿನಲ್ಲಿ ಪಾಠದ ಜೊತೆಯಲ್ಲೇ ಹೆಚ್ಚಿನದ್ದನ್ನು ಮಾಡುವುದು ಅಗತ್ಯ. ವಿದ್ಯಾರ್ಥಿಗಳು ಹೆಚ್ಚಿನದ್ದನ್ನ ಓದುವಂತೆ, ಬರೆಯುವಂತೆ, ಸಂಶೋಧಿಸುವಂತೆ, ಪ್ರಾಯೋಗಿಕವಾಗಿ ಚರ್ಚಿಸುವಂತೆ, ಸಮಸ್ಯೆಗಳನ್ನು ಪರಿಹರಿಸುವಂತೆ ಪ್ರೇರೇಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಯೋಗಶೀಲತೆಗೆ ಅನುವು ಮಾಡಿಕೊಡುವಂತಹ ಹೊಸ ಯೋಜನೆ ರೂಪಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಚಿಂತನೆ ನಡೆಸುತ್ತಿದೆ. ವಿಜ್ಞಾನ, ತಂತ್ರಜ್ಞಾನ, ರೊಬೊಟಿಕ್ಸ್, ಪರಿಸರ ಮತ್ತು ಪರಿಸರ ವಿಜ್ಞಾನ, ಖಗೋಳಶಾಸ್ತ್ರ ಮತ್ತು ಗಣಿತದ ಪರಿಕಲ್ಪನೆಯನ್ನು ಚೆನ್ನಾಗಿ ಅರ್ಥಮಾಢಿಕೊಳ್ಳಲು ಉಪಕರಣಗಳು ಮತ್ತು ಸಲಕರಣೆಗಳೊಂದಿಗೆ ಕೆಲಸ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದು ನಮ್ಮ ಉದ್ದೇಶವಾಗಿದೆ. ಈ ಮೂಲಕ ನಮ್ಮ ವಿದ್ಯಾರ್ಥಿಗಳು ಎಐ ಮತ್ತು ಮೆಷಿನ್ ಲರ್ನಿಂಗ್ ನಂತಹ ಕ್ಷೇತ್ರಗಳಲ್ಲೂ ಸಾಧನೆ ಮಾಡುವ ನಿಟ್ಟಿನಲ್ಲಿ ಪ್ರೇರೇಪಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದ ‘ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘AI ಕಲಿಕೆ’- ಸಚಿವ ಎನ್ ಎಸ್ ಭೋಸರಾಜು
Good News: ರಾಜ್ಯದಲ್ಲಿ ಬೇಸಿಗೆಯಲ್ಲಿ ‘ವಿದ್ಯುತ್ ಕಡಿತ’ ಇರುವುದಿಲ್ಲ: ಇಂಧನ ಸಚಿವ ಕೆಜೆ ಜಾರ್ಜ್