ಕೃಷಿ ಇಲಾಖೆಯಿಂದ 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾಯೋಜನೆ (Pಒಈಃಙ) ಅಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯವರಿAದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಬಳ್ಳಾರಿ ತಾಲ್ಲೂಕಿನಲ್ಲಿ 23 ಪ್ರಸ್ತಾವನೆಗಳು ಹಾಗೂ ಕುರುಗೋಡು ತಾಲ್ಲುಕಿನಲ್ಲಿ 3 ಪ್ರಸ್ತಾವನೆಗಳು ತಿರಸ್ಕೃತಗೊಂಡಿದ್ದು, ತಿರಸ್ಕೃತಗೊಂಡ ರೈತರ ಪ್ರಸ್ತಾವನೆ ವಿವರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಆದ್ದರಿಂದ ರೈತರು ಆಕ್ಷೇಪಣೆಗಳು ಇದ್ದಲ್ಲಿ ಮಾ.10 ರೊಳಗೆ ಸಲ್ಲಿಸಬಹುದು.
ನಿಗದಿತ ಸಮಯದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸದಿದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಸಿಂಧುವೆAದು ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ರೈತ ಸಂಪರ್ಕಕೇAದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Good News: ರಾಜ್ಯದಲ್ಲಿ ಬೇಸಿಗೆಯಲ್ಲಿ ‘ವಿದ್ಯುತ್ ಕಡಿತ’ ಇರುವುದಿಲ್ಲ: ಇಂಧನ ಸಚಿವ ಕೆಜೆ ಜಾರ್ಜ್