ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು. ದೀಪ ಬೆಳಗಿಸುವ ಮೂಲಕ ಚಿತ್ರೋತ್ಸವಕ್ಕೆ ಸಿಎಂ ಚಾರನೆ ನೀಡಿದರು.
ಇಂದು ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಇಂದಿನಿಂದ 8 ದಿನಗಳ ಕಾಲ ಚಲನಚಿತ್ರೋತ್ಸವ ನಡೆಯಲಿದೆ. 60ಕ್ಕೂ ಹೆಚ್ಚು ವಿದೇಶಿ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದಾವೆ.
ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದ ಆವರಣದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೇ, ನಟ ಶಿವರಾಜ್ ಕುಮಾರ್ ಚಲನಚಿತ್ರೋತ್ಸವದ ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲಾ, ನಟ ಶಿವರಾಜ್ ಕುಮಾರ್, ರಾಯಭಾರಿ ಕಿಶೋರ್ ಕುಮಾರ್, MLC ನಜೀರ್ ಅಹಮದ್, ಗೋವಿಂದ್ ರಾಜ್, ಶಾಸಕರಾದ ರಿಜ್ವಾನ್ ಅರ್ಷದ್, ಸಲೀಂ ಅಹಮದ್, ಉಮಾಶ್ರೀ, ಸೌತ್ ನಟಿ ಪ್ರಿಯಾಂಕಾ ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಪಲ್ಟಿಯಾಗಿ ಭೀಕರ ಅಪಘಾತ: ಇಬ್ಬರು ಸಾವು, 20 ಮಂದಿಗೆ ಗಾಯ