ನವದೆಹಲಿ : ರಾಜ್ಯದ ಹಲವು ಹೋಟೆಲ್ ಗಳಲ್ಲಿ ಇಡ್ಲಿ ತಯ್ಯಾರಿಸುವ ವೇಳೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಇತ್ತೀಚಿಗೆ ರಾಜ್ಯ ಸರ್ಕಾರ ಇಡ್ಲಿ ತಯ್ಯಾರಿಕೆ ವೇಳೆ ಪ್ಲಾಸ್ಟಿಕ್ ಬ್ಯಾನ್ ಮಾಡಿತ್ತು. ಇದೀಗ ಕೇಂದ್ರ ಸರ್ಕಾರ ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ.
ಕರ್ನಾಟಕದ ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರದ ಅಧೀನದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ.
ಹೋಟೆಲ್‌ಗಳಲ್ಲಿ ತಯಾರಿಸಲಾಗುವ ಆಹಾರದ ಸುರಕ್ಷತೆ ಹಾಗೂ ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು, * ಇಡ್ಲಿ ಬೇಯಿಸುವಾಗ ಬಳಸಲಾಗುವ ಪ್ಲಾಸ್ಟಿಕ್ ಹಾಳೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೇ ಎಫ್‌ಎಸ್‌ಎಸ್ ಎಐ, ರಾಜ್ಯ ಆಹಾರ ಸುರಕ್ಷತಾ ಇಲಾಖೆಗೆ ಈ ಸೂಚಿಸಿದೆ.