ಉಡುಪಿ : ಸದ್ಯ ರಾಜ್ಯ ಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಶಿವರಾತ್ರಿ ಅಂಗವಾಗಿ ಅಮಿತ್ ಶಾ ಭಾಗಿಯಾದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಭಾಗಿಯಾಗಿರುವ ಕುರಿತು ಭಾರಿ ಚರ್ಚೆಗೆ ಕಾರಣವಾಗಿದೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ
ಇಂದು ಉಡುಪಿ ಜಿಲ್ಲಾ ಪ್ರವಾಸಕ್ಕೆ ತೆರಳುವ ಡಿಸಿಎಂ ಡಿಕೆ ಶಿವಕುಮಾರ್ ವಿವಿಧ ಕಾರ್ಯಕ್ರಮಗಳಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗಿಯಾಗಲಿದ್ದಾರೆ.ಕಾಪು ಹಳೆ ಮಾರಿಗುಡಿ ಬ್ರಹ್ಮಕಲಶೋತ್ಸವದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.ಬಳಿಕ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಬಳಿಕ ಕಾರ್ಕಳದ ಕಾಂಗ್ರೆಸ್ ಕುಟುಂಬದಲ್ಲಿ ಡಿಕೆ ಶಿವಕುಮಾರ್ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.