ಕೊಪ್ಪಳ : ಚಲಿಸುತ್ತಿದ್ದ KSRTC ಬಸ್ಸಿನ ಟೈಯರ್ ಏಕಾಏಕಿ ಸ್ಪೋಟಗೊಂಡಿದೆ. ಆದರೆ ಈ ವೇಳೆ ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಿದೆ. ಈ ಘಟನೆಗೆ ಕೆಲವೇ ನಿಮಿಷ ಮುನ್ನ ಇದೇ ರಸ್ತೆಯಲ್ಲಿ ಸಚಿವ ಶಿವರಾಜ ತಂಗಡಗಿ ಹಾಗೂ ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್ ತೆರಳಿದ್ದರು ಎನ್ನಲಾಗಿದೆ.
ಗಂಗಾವತಿ ಸಾರಿಗೆ ಘಟಕಕ್ಕೆ ಸೇರಿದ ಬಸ್ ಕೊಪ್ಪಳದಿಂದ ಗಂಗಾವತಿಯತ್ತ ಸಂಚರಿಸುತ್ತಿದ್ದಾಗ ಮುಂದಿನ ಚಕ್ರ ಸ್ಫೋಟಗೊಂಡಿದೆ. ಚಾಲಕ ಮಂಜುನಾಥ ಗಾಣಿಗೇರ ತಕ್ಷಣ ಬಸ್ಸನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಪರಿಣಾಮ ಬಸ್ ಸುಮಾರು 100 ಮೀಟರ್‌ಗೂ ಹೆಚ್ಚು ತೆವಳಿಕೊಂಡು ಹೋಗಿ ನಿಂತಿದೆ. ಆದರೆ ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.