ಬೆಂಗಳೂರು : ಒಂದು ಕಡೆ ಇಶಾ ಫೌಂಡೇಶನ್ ಶಿವರಾತ್ರಿ ನಿಮಿತ್ಯ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಅಮಿತ್ ಶಾ ಜೊತೆಗೆ ವೇದಿಕೆಯಲ್ಲಿ ಭಾಗವಹಿಸಿದ್ದರಿಂದ ಡಿಕೆ ಶಿವಕುಮಾರ್ ಬಿಜೆಪಿಗೆ ಸೇರುತ್ತಿದ್ದಾರೆ ಎಂಬ ವದಂತಿಗಳು ಹರಡಿದ್ದು ಇನ್ನೊಂದು ಕಡೆ ಬಿಜೆಪಿಯ ಹಲವು ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕವಾದ ಹೇಳಿಕೆ ನೀಡಿದ್ದು, ಹಲವು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಸಾಕಷ್ಟು ಬಿಜೆಪಿ ಶಾಸಕರು ನಮ್ಮನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಸ್ಪೋಟಕ ವಾದಂತಹ ಹೇಳಿಕೆಯನ್ನು ನೀಡಿದ್ದಾರೆ.
ಈ ಬಗ್ಗೆ ನಾನು ನಮ್ಮ ಪಕ್ಷದಲ್ಲಿ ಚರ್ಚೆ ಮಾಡಿದ್ದೇನೆ. ನಮ್ಮ ಸಚಿವರು ಕೂಡ ಸಂಪರ್ಕದ ಬಗ್ಗೆ ಚರ್ಚಿಸಿದ್ದಾರೆ.ಆದರೆ ನಾನು ಯಾವುದನ್ನು ಬಹಿರಂಗ ಮಾಡುವುದಿಲ್ಲ.ಬಿಜೆಪಿ ಒಡೆದ ಮನೆಯಾಗಿದ್ದು, ಕಾಂಗ್ರೆಸ್ ಒಗ್ಗಟ್ಟಿನ ಮನೆಯಾಗಿದೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.