Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ `ಗ್ರಾಪಂ ಬಜೆಟ್’ ಮಾ.10 ರೊಳಗೆ ಮಂಡಿಸಿ : ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ.!
KARNATAKA

BIG NEWS : ರಾಜ್ಯದ ಎಲ್ಲಾ `ಗ್ರಾಪಂ ಬಜೆಟ್’ ಮಾ.10 ರೊಳಗೆ ಮಂಡಿಸಿ : ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ.!

By kannadanewsnow57

ಬೆಂಗಳೂರು : ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1) ರಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದ್ದಾರೆ.

ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ, ಗ್ರಾಮ ಪಂಚಾಯತಿಗಳು ತಮ್ಮ ಆಯವ್ಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸೂಚಿಸುವಂತೆ ಪಂಚಾಯತ್ ರಾಜ್‌ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಗಳಿಗೆ ವಿಶೇಷವಾದ ಮಹತ್ವವಿದೆ. ಗ್ರಾಮ ಪಂಚಾಯತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದು ಸಂವಿಧಾನದ ಆಶಯವಾಗಿದೆ. ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡ ಗ್ರಾಮ ಪಂಚಾಯಿತಿಗಳು ಸ್ಥಳೀಯವಾಗಿ ಜನರಿಗೆ ಅವಶ್ಯವಾಗಿ ಬೇಕಾದ ಮೂಲಸೌಕರ್ಯಗಳನ್ನು ಒದಗಿಸಲು ಹಾಗೂ ದೈನಂದಿನ ಸೇವೆಗಳನ್ನು ನೀಡಲು ತಾವೇ ಕಾರ್ಯಕ್ರಮಗಳನ್ನು ರೂಪಿಸಬೇಕು ಎನ್ನುವುದು ನನ್ನ ಉದ್ದೇಶ ಎಂದು ಹೇಳಿದ್ದಾರೆ.

ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಈ ವಿಷಯವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಆಯವ್ಯಯ ಸಿದ್ದಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಗ್ರಾಮ ಪಂಚಾಯತಿಗಳು ಇನ್ನಷ್ಟು ಉತ್ತರದಾಯಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

BIG NEWS: All gram panchayat budgets to be presented by March 10: Priyank Kharge
Share. Facebook Twitter LinkedIn WhatsApp Email

Related Posts

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

2 Mins Read
Recent News

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

ಮಧುಮೇಹಿಗಳು ಮಾವಿನಹಣ್ಣು ತಿನ್ನಬಹುದೇ? ಸಕ್ಕರೆ ಮಟ್ಟ ಏರದಂತೆ ಮಾವು ಸವಿಯಲು ಇಲ್ಲಿದೆ ತಜ್ಞರ ಮಾರ್ಗದರ್ಶಿ!

State News
KARNATAKA

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅತ್ಯುನ್ನತ ಜವಾಬ್ದಾರಿಯೊಂದನ್ನು ನೀಡಿದೆ.…

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

​ರಾಜೀನಾಮೆಯ ನಂತರವೂ ‘ಕಾವೇರಿ’ ನಿವಾಸದಲ್ಲೇ ಸಿದ್ದರಾಮಯ್ಯ ಮುಂದುವರಿಕೆ: ಕಾರಣವೇನು?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.