ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ಬಾರಿಯ ಬೇಸಿಗೆಯಲ್ಲಿ ವಿದ್ಯುತ್ ಕಡಿ ಇರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,000 ಮೆಗಾವ್ಯಾಟ್ ಅಧಿಕ ಇದೆ. ವಿದ್ಯುತ್ ಕೊರತೆ ಆಗದಂತೆ ಉತ್ತರ ಪ್ರದೇಶ, ಪಂಜಾಬ್‌ನಿಂದ ವಿನಿಮಯ ಆಧಾರದಲ್ಲಿ ವಿದ್ಯುತ್ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಕಡಿತ ಇರುವುದಿಲ್ಲ ಎಂದು ತಿಳಿಸಿದ್ದಾರೆ.