ಶಿವಮೊಗ್ಗ: ರಾಜ್ಯದಲ್ಲಿ ಕೋಳಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಆರೋಗ್ಯ ಇಲಾಖೆ ವರದಿ ಆಧರಿಸಿ ಶಾಲೆಗಳಲ್ಲಿ ಮೊಟ್ಟೆ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಹಿಂದೆಯೂ ಕೋಳಿ ಜ್ವರ ಬಂದಾಗ ರಾಜ್ಯ ಸರ್ಕಾರ ಮೊಟ್ಟೆ ವಿತರಣೆ ಮುಂದುವರೆಸಿತ್ತು, ಆರೋಗ್ಯ ಇಲಾಖೆ ವರದಿ ಆಧರಿಸಿ ಶಾಲೆಗಳಲ್ಲಿ ಮೊಟ್ಟೆ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ತಾಂತ್ರಿಕ ಸಮಸ್ಯೆಗಳಿದ್ದು, ಕನ್ನಡ ಒಳಿತಿಗೆ ಅಗತ್ಯವಿರುವ ಕ್ರಮವನ್ನು ಸರ್ಕಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.