ಬೆಂಗಳೂರು : ವಿಧಾನಸಭೆಯಲ್ಲಿ ಗುತ್ತಿಗೆದಾರರೊಂದಿಗೆ ಸಿಎಂ ಡಿಸಿಎಂ ಸಭೆ ನಡೆಸಲಿದ್ದಾರೆ. ಸರ್ಕಾರಕ್ಕೆ ಮಗ್ಗುಲ ಮುಳ್ಳಾದ ರಾಜ್ಯ ಗುತ್ತಿಗೆದಾರರ ಸಂಘವು ಇದೀಗ ಕಮಿಷನ್ ನಿಲ್ಲಿಸಿ ಬಾಕಿ ಬಿಲ್ ಪಾವತಿ ಮಾಡಿ, ಅಕಸ್ಮಾತ್ ಬಿಲ್ ಪಾವತಿಸದಿದ್ದರೆ ಹೈಕಮಾಂಡ್ಗೆ ದೂರು ಕೊಡುತ್ತೇವೆ ಎಂದು ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ.
ಗುತ್ತಿಗೆದಾರರ ಎಚ್ಚರಿಕೆ ಬೆನ್ನಲ್ಲೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಗೆ ಶಿವಕುಮಾರ್ ಸಭೆ ಕರೆದಿದ್ದಾರೆ. ಹಾಗಾಗಿ ವಿಧಾನಸಭೆಯಲ್ಲಿ ಗುತ್ತಿಗೆದಾರರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ.
ನಿನ್ನೆ ತಾನೆ ರಾಜ್ಯ ಗುತ್ತಿಗೆದಾರರ ಸಂಘವು ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರವಾದ ಆರೋಪ ಮಾಡಿತ್ತು ಈ ಹಿಂದಿನ ಬಿಜೆಪಿ ಸರ್ಕಾರ ಕೇವಲ 40% ಮಾತ್ರ ಕಮಿಷನ್ ಕೇಳುತ್ತಿದ್ದರೆ ಈಗಿದಿಕ ಕಾಂಗ್ರೆಸ್ ಅದಕ್ಕಿಂತಲೂ ಹೆಚ್ಚಿನ ಕಮಿಷನ್ ಕೇಳುತ್ತಿದೆ ಎಂದು ಗಂಭೀರವಾದ ಆರೋಪ ರಾಜ್ಯ ಗುತ್ತಿಗೆದಾರರ ಸಂಘ ಮಾಡಿತು ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತರಾತುರಿಯಲ್ಲಿ ಸಭೆ ಕರೆದಿದ್ದಾರೆ.