ಬೆಂಗಳೂರು : ಕಳೆದ ಎರಡು ತಿಂಗಳಿನಿಂದ ಗ್ರಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬಂದಿಲ್ಲ ಎಂದು ರಾಜ್ಯದ ಮಹಿಳೆಯರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಇದೇ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಶೀಘ್ರ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ಹಾಕುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ವಿಳಂಬ ಆಗಿರುವ ಕುರಿತು ಹಣ ಹಾಕೋದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದೆ. ಬಾಕಿ ಇರುವ ಎರಡು ತಿಂಗಳ ಹಣವನ್ನು ಈಗ ಬ್ಯಾಂಕ್ ಖಾತೆಗೆ ಹಾಕುತ್ತೇವೆ. ಯಾವುದೇ ಫಿಲ್ಟರ್ ನಾವು ಮಾಡುತ್ತಿಲ್ಲ ಎಲ್ಲರಿಗೂ ಕೂಡ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ ಗ್ಯಾರಂಟಿಗಳನ್ನು ಮುಂದುವರಿಸುತ್ತೇವೆ.ಯಾವುದೇ ಕಾರಣಕ್ಕೂ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.