ಮಂಗಳೂರು : CISF ಮಹಿಳಾ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ಹೇಳಿ ಯುವಕನೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಆಮೇಲೆ ವಂಚನೆ ಈಸಾಗ್ರಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ನೊಂದ ಯುವಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಅಭಿಷೇಕ್ ಸಿಂಗ್ (40) ಎಂದು ತಿಳಿದುಬಂದಿದ್ದು, ಮಂಗಳೂರು ನಗರದ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದಾನೆ.
ವಿಡಿಯೋದಲ್ಲಿ ಅಭಿಷೇಕ್ ಸಿಂಗ್ CISF ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಅವರೊಂದಿಗೆ ಸಂಬಂಧ ಹೊಂದಿದ್ದ.ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ಅಭಿಷೇಕ್ ಸಿಂಗ್ ಅವರ ಜೊತೆ ಸಂಬಂಧ ಬೆಳೆಸಿದ್ದರು ಎನ್ನಲಾಗಿದೆ.
ಅಭಿಷೇಕ್ ಸಿಂಗ್ ಮೂಲತಃ ಉತ್ತರ ಪ್ರದೇಶದವನಾಗಿದ್ದು, ತಮಿಳುನಾಡಿನ ಚೆನ್ನೈನಲ್ಲಿ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಸಹೋದ್ಯೋಗಿಗಳೊಂದಿಗೆ ವಸ್ತು ಪ್ರದರ್ಶನಕ್ಕೆ ಎಂದು ಮಂಗಳೂರಿಗೆ ಆಗಮಿಸಿದ್ದ.ಈ ವೇಳೆ ನಗರದ ಖಾಸಗಿ ಲಾಡ್ಜ್ ನಲ್ಲಿ ತಂಗಿದ್ದ ವೇಳೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.