ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಇದೆ ಮಾರ್ಚ್ 22ರಂದು ಕನ್ನಡ ಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಈ ಒಂದು ಕರ್ನಾಟಕ ಬಂದ್ ನಡೆಯುತ್ತೆ. ಇದೀಗ ಇದೆ ವಿಚಾರವಾಗಿ ಸಚಿವ ರಾಮಲಿಂಗ ರೆಡ್ಡಿ ಅವರು ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ನಡೆದು 8-10 ದಿನಗಳಾಗಿವೆ. ನಮ್ಮ ಬಸ್ ಗಳಿಗೆ ಹಾಗೂ ಸಿಬ್ಬಂದಿಗೆ ಮಹಾರಾಷ್ಟ್ರದವರು ಮಸಿ ಬಳಿದರು. ಈಗ ಕರ್ನಾಟಕ ಬಂದ ಅವಶ್ಯಕತೆ ಇಲ್ಲ. ಹೋರಾಟಗಾರರ ಕನ್ನಡದ ಮೇಲಿನ ಅಭಿಮಾನವನ್ನು ಸ್ವಾಗತಿಸುತ್ತೇವೆ. ಮಾರ್ಚ್ 22 ರಂದು ಬಂದ ಅವಶ್ಯಕತೆ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.