ಬೆಂಗಳೂರು : ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯನ್ನು ಕಲ್ಪಿಸುವಂತೆ ಕೋರಲಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಕಛೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದು ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡು ಬಂದಿರುತ್ತದೆ.
ಈ ಕುರಿತು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇರುವ ಕುರಿತ ಮಾಹಿತಿಯನ್ನು “ದಿನಾಂಕ: 10.03.2025 ರೊಳಗೆ ಅತೀ ತುರ್ತಾಗಿ” ಒದಗಿಸುವಂತೆ ಕೋರಿದೆ.