Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಾಯನದಿಂದ ಅರಿಜಿತ್ ಸಿಂಗ್ ನಿವೃತ್ತಿ ಘೋಷಣೆ: ಗಾಯಕನ ಮನೆಗೆ ಭೇಟಿ ನೀಡಿದ ಅಮೀರ್ ಖಾನ್ | Watch video

03/02/2026 10:45 AM

ದಾವಣಗೆರೆ : ಆಸ್ತಿಗಾಗಿ ಸಹೋದರರ ಮಧ್ಯೆ ಗಲಾಟೆ : ಮಾರಕಾಸ್ತ್ರಗಳಿಂದ ಕೊಚ್ಚಿ ತಮ್ಮನನ್ನೇ ಹತ್ಯೆಗೈದ ಅಣ್ಣ!

03/02/2026 10:37 AM

BREAKING : ಆಸ್ತಿ ವಿಚಾರವಾಗಿ ಕೌಟುಂಬಿಕ ಕಲಹ : ಜಗಳ ಬಿಡಿಸಲು ಬಂದ ಮಗಳನ್ನೇ ಕೊಂದ ಪಾಪಿ ತಂದೆ!

03/02/2026 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅನಧಿಕೃತ, ರೆವಿನ್ಯೂ ಜಾಗದಲ್ಲಿ ನಿವೇಶನ ನಿರ್ಮಿಸಿಕೊಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಇ-ಆಸ್ತಿ ಅಭಿಯಾನ.!
KARNATAKA

BIG NEWS : ಅನಧಿಕೃತ, ರೆವಿನ್ಯೂ ಜಾಗದಲ್ಲಿ ನಿವೇಶನ ನಿರ್ಮಿಸಿಕೊಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಇ-ಆಸ್ತಿ ಅಭಿಯಾನ.!

By kannadanewsnow5705/03/2025 5:20 AM

ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಆಸ್ತಿ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಇ-ಆಸ್ತಿ ಅಭಿಯಾನ ಕುರಿತು ಚರ್ಚಿಸಲು ಮಹಾನಗರಪಾಲಿಕೆ, ಡಿಯುಡಿಸಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆಯಲ್ಲಿ ಅವರು ಮಾತನಾಡಿದರು.

ಕರ್ನಾಟಕ ಪೌರಸಭೆಗಳ ತೆರಿಗೆ ನಿಯಮ 2025 ಮತ್ತು ಕರ್ನಾಟಕ ಮಹಾನಗರಪಾಲಿಕೆ ತೆರಿಗೆ ನಿಯಮ 2025 ನ್ನು ಜಾರಿಗೆ ತಂದಿದ್ದು ಇದರಂತೆ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎ-ಖಾತಾ ಮತ್ತು ಬಿ-ಖಾತೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ದಿ: 10-09-2024 ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಲಿದ್ದು ಇಂತಹ ಪ್ರಕರಣಗಳ ವ್ಯಾಪ್ರಿಗೆ ಬರುವ ಆಸ್ತಿ ಮಾಲೀಕರು ತಮ್ಮ ವ್ಯಾಪ್ತಿಯ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಲ್ಲಿ ನಿಗದಿತ ದಾಖಲೆಗಳನ್ನು ಸಲ್ಲಿಸಿ ಇ-ಖಾತೆಗಳನ್ನು ಪಡೆಯಬಹುದು.

ಇ_ಖಾತೆ ಮಾಡಿಸುವಲ್ಲಿ ಇಸಿ ಪಡೆಯಲು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವುದು ಕಂಡು ಬಂದಿದೆ. ಆದ್ದರಿಂದ ಇಸಿ ಗೆ ಅರ್ಜಿ ಸಲ್ಲಿಸಿದ 3 ದಿನಗಳ ಒಳಗೆ ಹಾಗೂ ಗರಿಷ್ಟ 1 ವಾರದೊಳಗೆ ಇಸಿ ನೀಡಬೇಕು. ಹಾಗೂ ಆಸ್ತಿ ಮಾಲೀಕರ ವ್ಯವಹಾರದ ನಂತರದ ಒಂದು ವರ್ಷದ ಇಸಿ ಹಾಗೂ ಆನ್‌ಲೈನ್ ಇಸಿ ಯನ್ನು ಪರಿಗಣಿಸುವಂತೆ ತಿಳಿಸಿದ ಅವರು ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದೇ, ಇಸಿ ಪಡೆಯಲು ಸಮರ್ಪಕವಾಗಿ ಮಾಹಿತಿಯನ್ನು ಮಾಲೀಕರಿಗೆ ನೀಡಬೇಕು.

ಈ ವಿಷಯದಲ್ಲಿ ಯಾವುದೇ ದೂರುಗಳು ಬಾರದಂತೆ ಎಚ್ಚರಿಕೆ ವಹಿಸಿ, ಇ-ಖಾತಾ ಅಭಿಯಾನವನ್ನು ಸಕ್ರಿಯವಾಗಿ ಕೈಗೊಳ್ಳಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಂಡು ಸಾರ್ವಜನಿಕರಿಗೆ ಉತ್ತಮವಾಗಿ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.

ಎ-ಖಾತೆ, ಬಿ-ಖಾತೆ ಪಡೆಯುವ ಕುರಿತು ಜನದಟ್ಟಣೆ ಇರುವೆಡೆ ಫ್ಲೆಕ್ಸ್, ಹೋರ್ಡಿಂಗ್ಸ್, ಕಸದ ವಾಹನದಲ್ಲಿ ಜಿಂಗಲ್ಸ್, ಆಟೋ ಪ್ರಚಾರ, ಕರಪತ್ರಗಳ ಮೂಲಕ ವ್ಯಾಪಕ ಪ್ರಚಾರ ನೀಡಬೇಕು. ಹಾಗೂ ಹೆಲ್ಪ್ಲೈನ್ ಮೂಲಕ ಇ-ಖಾತೆ ಪಡೆಯಲು ಮಾಲೀಕರಿಗೆ ಸಹಕರಿಸಬೇಕು ಎಂದರು.

ಡಿಯುಡಿಸಿ ಯೋಜನಾ ನಿರ್ದೇಶಕ ಕೆ.ರಂಗಸ್ವಾಮಿ ಮಾತನಾಡಿ, ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 263808 ಆಸ್ತಿಗಳಿದ್ದು, ಇದರಲ್ಲಿ 43941 ಅನಧಿಕೃತ ಆಸ್ತಿಗಳು ಡಿಸಿಬಿನಲ್ಲಿ ನಮೂದಾಗಿದ್ದು ಇ-ಆಸ್ತಿ ತಂತ್ರಾAಶದ ಮೂಲಕ ಒಟ್ಟು ಅನುಮೋದಿತ ಆಸ್ತಿಗಳು 50,599 ಅಧಿಕೃತ, 1773 ಅನಧಿಕೃತ, 7 ಅಕ್ರಮ ಸೇರಿದಂತೆ 52,379 ಇವೆ. ಕಳೆದ ಫೆ.19 ರಿಂದ ಮಾ.03 ರವರೆಗೆ 1113 ಅಧಿಕೃತ, 22 ಅನಧಿಕೃತ ಆಸ್ತಿಗಳ ಇ-ಆಸ್ತಿ ತಂತ್ರಾAಶದಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್, ಪಾಲಿಕೆ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

BIG NEWS: Good news for those who have built their houses on unauthorized revenue land: `e-Asthi Abhiyan` from the government!
Share. Facebook Twitter LinkedIn WhatsApp Email

Related Posts

ದಾವಣಗೆರೆ : ಆಸ್ತಿಗಾಗಿ ಸಹೋದರರ ಮಧ್ಯೆ ಗಲಾಟೆ : ಮಾರಕಾಸ್ತ್ರಗಳಿಂದ ಕೊಚ್ಚಿ ತಮ್ಮನನ್ನೇ ಹತ್ಯೆಗೈದ ಅಣ್ಣ!

03/02/2026 10:37 AM1 Min Read

BREAKING : ಆಸ್ತಿ ವಿಚಾರವಾಗಿ ಕೌಟುಂಬಿಕ ಕಲಹ : ಜಗಳ ಬಿಡಿಸಲು ಬಂದ ಮಗಳನ್ನೇ ಕೊಂದ ಪಾಪಿ ತಂದೆ!

03/02/2026 10:30 AM1 Min Read

BIG NEWS : ಕೆಂಪೇಗೌಡ ಏರ್ಪೋರ್ಟ್ ನ ರನ್ ವೇ ನಲ್ಲಿ ಬೀದಿ ನಾಯಿಗಳ ಹಾವಳಿ : ತಪ್ಪಿದ ಭಾರಿ ಅನಾಹುತ

03/02/2026 10:23 AM1 Min Read
Recent News

ಗಾಯನದಿಂದ ಅರಿಜಿತ್ ಸಿಂಗ್ ನಿವೃತ್ತಿ ಘೋಷಣೆ: ಗಾಯಕನ ಮನೆಗೆ ಭೇಟಿ ನೀಡಿದ ಅಮೀರ್ ಖಾನ್ | Watch video

03/02/2026 10:45 AM

ದಾವಣಗೆರೆ : ಆಸ್ತಿಗಾಗಿ ಸಹೋದರರ ಮಧ್ಯೆ ಗಲಾಟೆ : ಮಾರಕಾಸ್ತ್ರಗಳಿಂದ ಕೊಚ್ಚಿ ತಮ್ಮನನ್ನೇ ಹತ್ಯೆಗೈದ ಅಣ್ಣ!

03/02/2026 10:37 AM

BREAKING : ಆಸ್ತಿ ವಿಚಾರವಾಗಿ ಕೌಟುಂಬಿಕ ಕಲಹ : ಜಗಳ ಬಿಡಿಸಲು ಬಂದ ಮಗಳನ್ನೇ ಕೊಂದ ಪಾಪಿ ತಂದೆ!

03/02/2026 10:30 AM

‘ಮೊಗಾಂಬೊ ಖುಶ್ ಹುವಾ’: ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದದ ಬಗ್ಗೆ ‘ಪ್ರಧಾನಿ ಮೋದಿ’ ವಿರುದ್ಧ ಕಾಂಗ್ರೆಸ್ ಟೀಕೆ

03/02/2026 10:23 AM
State News
KARNATAKA

ದಾವಣಗೆರೆ : ಆಸ್ತಿಗಾಗಿ ಸಹೋದರರ ಮಧ್ಯೆ ಗಲಾಟೆ : ಮಾರಕಾಸ್ತ್ರಗಳಿಂದ ಕೊಚ್ಚಿ ತಮ್ಮನನ್ನೇ ಹತ್ಯೆಗೈದ ಅಣ್ಣ!

By kannadanewsnow0503/02/2026 10:37 AM KARNATAKA 1 Min Read

ದಾವಣಗೆರೆ : ಆಸ್ತಿಗಾಗಿ ಕಲಹ ಉಂಟಾಗಿ ಅಣ್ಣನೊಬ್ಬ ತಮ್ಮನನ್ನೇ ಬೀಕರವಾಗಿ ಕೊಲೆ ಮಾಡಿದ್ದಾನೆ. ಮಾರಕಾಸ್ತ್ರಗಳಿಂದ ಕೊಚ್ಚಿ ಸಿ.ಕೆ ನೀಲಪ್ಪ (62)…

BREAKING : ಆಸ್ತಿ ವಿಚಾರವಾಗಿ ಕೌಟುಂಬಿಕ ಕಲಹ : ಜಗಳ ಬಿಡಿಸಲು ಬಂದ ಮಗಳನ್ನೇ ಕೊಂದ ಪಾಪಿ ತಂದೆ!

03/02/2026 10:30 AM

BIG NEWS : ಕೆಂಪೇಗೌಡ ಏರ್ಪೋರ್ಟ್ ನ ರನ್ ವೇ ನಲ್ಲಿ ಬೀದಿ ನಾಯಿಗಳ ಹಾವಳಿ : ತಪ್ಪಿದ ಭಾರಿ ಅನಾಹುತ

03/02/2026 10:23 AM

ಈ ಬೇವಿನ ಮರದಲ್ಲಿ ಜಿನುಗುತ್ತಿದೆ, ಸಕ್ಕರೆ ಜೇನುತುಪ್ಪದಂತಹ ಸಿಹಿ ದ್ರಾವಣ : ಚಾಮರಾಜನಗರದಲ್ಲಿ ವಿಸ್ಮಯಕಾರಿ ಮರ ಪತ್ತೆ!

03/02/2026 10:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.