ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಕೇರಳ ಮಾದರಿಯಲ್ಲಿ ಎಂ.ಎಸ್.ಐ.ಎಲ್ ಮೂಲಕ ಚಿಟ್ ಫಂಡ್ ವ್ಯವಸ್ಥೆ ಜಾರಿಗೆ ಚಿಂತನೆ ನಡೆಸಲಾಗಿದೆ.
ಈ ಕುರಿತು ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರು ಮಾಹಿತಿ ನೀಡಿದ್ದು, ಕೇರಳ ಮಾದರಿಯಲ್ಲಿ ಎಂ.ಎಸ್.ಐ.ಎಲ್. ಮೂಲಕ ಚಿಟ್ ಫಂಡ್ ವ್ಯವಸ್ಥೆ ಜಾರಿ ಮಾಡಿ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಶಕ್ತಿ ತುಂಬಲು ಚಿಂತನೆ ನಡೆಸಲಾಗುತ್ತಿದೆ. ಸರ್ಕಾರದ ಬೆಂಬಲವಿರುವ ಈ ಚಿಟ್ ಫಂಡ್ ವ್ಯವಸ್ಥೆ ಸಂಪೂರ್ಣ ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿದ್ದು, ಮಹಿಳಾ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದಾರೆ.