ಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಸಿಹಿಸುದ್ದಿ ಎನ್ನುವಂತೆ ಈ ತಿಂಗಳು ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆ.ಜೆ ಅಕ್ಕಿಯನ್ನು ವಿತರಿಸಲಾಗುತ್ತದೆ.
ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್ ಮುನಿಯಪ್ಪ ಮಾಹಿತಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆ.ಜಿ. ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಂದಹಾಗೇ ರಾಜ್ಯ ಸರ್ಕಾರದಿಂದ ಈ ಮೊದಲು ಹತ್ತು ಕೆಜಿ ಅಕ್ಕಿ ಹಾಗೂ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಾಗಿ ಹಣವನ್ನು ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುತ್ತಿತ್ತು. ಅದನ್ನು ನಿಲ್ಲಿಸಲಾಗಿದ್ದು, ಈ ತಿಂಗಳು ಅನ್ನಭಾಗ್ಯ ಫಲಾನುಭವಿಗಳಿಗೆ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ.
ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆ.ಜಿ. ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ. ಎಚ್. ಮುನಿಯಪ್ಪ ಅವರು ತಿಳಿಸಿದ್ದಾರೆ.#AnnaBhagya… pic.twitter.com/mn1RJMbU5q
— DIPR Karnataka (@KarnatakaVarthe) March 4, 2025
ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ‘ಸುಶೀಲ್ ಕುಮಾರ್’ಗೆ ಬಿಗ್ ರಿಲೀಫ್: ಜಾಮೀನು ಮಂಜೂರು