ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿನ ಮಹಿಳಾ ಸ್ವಸಹಾಯ ಗುಂಪುಗಳಿಗೆ ಶಕ್ತಿ ತುಂಬೋದಕ್ಕೆ ಮುಂದಾಗಿದೆ. ಇದಕ್ಕಾಗಿ ಕೇರಳ ಮಾದರಿಯಲ್ಲಿ ಚಿಟ್ ಫಂಡ್ ವ್ಯವಸ್ಥೆಯನ್ನು ಜಾರಿಗೆ ಚಿಂತನೆ ನಡೆಸಲಾಗಿದೆ.
ಈ ಕುರಿತಂತೆ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಕೇರಳ ಮಾದರಿಯಲ್ಲಿ ಎಂ.ಎಸ್.ಐ.ಎಲ್. ಮೂಲಕ ಚಿಟ್ ಫಂಡ್ ವ್ಯವಸ್ಥೆ ಜಾರಿ ಮಾಡಿ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಶಕ್ತಿ ತುಂಬಲು ಚಿಂತನೆ ನಡೆಸಲಾಗುತ್ತಿದೆ. ಸರ್ಕಾರದ ಬೆಂಬಲವಿರುವ ಈ ಚಿಟ್ ಫಂಡ್ ವ್ಯವಸ್ಥೆ ಸಂಪೂರ್ಣ ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿದ್ದು, ಮಹಿಳಾ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದಾರೆ.
ಕೇರಳ ಮಾದರಿಯಲ್ಲಿ ಎಂ.ಎಸ್.ಐ.ಎಲ್. ಮೂಲಕ ಚಿಟ್ ಫಂಡ್ ವ್ಯವಸ್ಥೆ ಜಾರಿ ಮಾಡಿ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಶಕ್ತಿ ತುಂಬಲು ಚಿಂತನೆ ನಡೆಸಲಾಗುತ್ತಿದೆ. ಸರ್ಕಾರದ ಬೆಂಬಲವಿರುವ ಈ ಚಿಟ್ ಫಂಡ್ ವ್ಯವಸ್ಥೆ ಸಂಪೂರ್ಣ ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿದ್ದು, ಮಹಿಳಾ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಲಿದೆ… pic.twitter.com/NxZUW0p7Pg
— DIPR Karnataka (@KarnatakaVarthe) March 4, 2025