ಬೆಂಗಳೂರು: ಎಲೆ ಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು.
ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನಲ್ಲಿ ರೈತರಿಗೆ ಪ್ರತಿ ಹೆಕ್ಟೇರ್‌ಗೆ ರೂ. 4000/- ಗಳಂತೆ 1.5 ಹೆಕ್ಟೇರ್ ವರೆಗೆ ಪ್ರತಿ ಫಲಾನುಭವಿಗೆ ಗರಿಷ್ಠ ರೂ. 6000/- ಮೊತ್ತದ ಸಸ್ಯ ಸಂರಕ್ಷಣಾ ಔಷಧಿಗಳನ್ನು 6,250 ಹೆಕ್ಟೇರ್ ಪ್ರದೇಶಕ್ಕೆ ವಿತರಿಸಿ ರೂ. 2.50 ಕೋಟಿ ಅನುದಾನವನ್ನು 12,300 ಅಡಿಕೆ ಬೆಳೆಗಾರರಿಗೆ ನೀಡಲಾಗಿರುತ್ತದೆ ಎಂದು ತಿಳಿಸಿದರು.
ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಳೆಯ ಕಟಾವು ಹಾಗೂ (ದೋಟಿ) ಖರೀದಿಸಲು ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇ. 40 ರಷ್ಟು ಹಾಗೂ ಪರಿಶಿಷ್ಟ ಜಾತಿ / ಪಂಗಡದವರಿಗೆ ಶೇ.50 ರಂತೆ ಸಹಾಯಧನ ನೀಡಲಾಗುತ್ತಿದೆ. 2023-24ನೇ ಸಾಲಿನಲ್ಲಿ 1,201 ಫಲಾನುಭವಿಗಳಿಗೆ ರೂ.3.66 ಕೋಟಿ ಸಹಾಯಧನ ನೀಡಲಾಗಿದೆ. ಅಡಿಕೆ ಎಲೆ ಚುಕ್ಕೆ ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಹಯೋಗದೊಂದಿಗೆ ತರಬೇತಿ ಕಾರ್ಯಗಾರಗಳು ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವುದರ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ ‘ಅನಧಿಕೃತ ಸ್ವತ್ತುಗಳ ಮಾಲೀಕ’ರಿಗೆ ಗುಡ್ ನ್ಯೂಸ್: ‘ಇ-ಖಾತಾ’ ನೀಡಲು ಸರ್ಕಾರ ಕ್ರಮ
ರಾಜ್ಯದಲ್ಲಿ ‘ಅಕ್ರಮ ಮದ್ಯ ಮಾರಾಟ’ ತೆಡೆಗೆ ಸರ್ಕಾರದಿಂದ ಮಹತ್ವದ ಕ್ರಮ: ಗಸ್ತು ಹೆಚ್ಚಳ, ದಾಳಿ, ಕೇಸ್ ಫಿಕ್ಸ್