ಮಂಗಳೂರು: ನಗರದಲ್ಲಿ ಆಟೋವೊಂದರಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡೋದಕ್ಕೆ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಕೊಂಡೊಯ್ಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಆಟೋ ಮೂಲಕ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಮೊಹಮ್ಮದ್ ಅಬ್ದುಲ್ ಜಲೀಲ್ ಎಂಬಾತ ಕೊಂಡೊಯ್ದಿದ್ದನು. ಈ ವಿಷಯ ಸಿಸಿಬಿ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಇಂದು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾದಕ ವಸ್ತುವನ್ನು ಮಾರಾಟ ಮಾಡೋದಕ್ಕೆ ಯತ್ನಿಸಿದಂತ ಸಂದರ್ಭದಲ್ಲಿಯೇ ಜಲೀಲ್ ನನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮೊಹಮ್ಮದ್ ಅಬ್ದುಲ್ ಜಲೀಲ್ ನಿಂದ 75 ಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಕೃತ್ಯಕ್ಕೆ ಬಳಸಿದಂತ ಆಟೋವನ್ನು ಸೀಜ್ ಮಾಡಲಾಗಿದೆ.
ಆರೋಪಿ ಮೊಹಮ್ಮದ್ ಅಬ್ದುಲ್ ಜಲೀಲ್ ಐಷಾರಾಮಿ ಜೀವನಕ್ಕೆ ಮಾರುಹೋಗಿ, ಹಣ ಗಳಿಕೆಗಾಗಿ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದನು ಎಂಬುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿತ ಆರೋಪಿಯ ವಿರುದ್ಧ ಕೇಸ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ಸಿಂಗಲ್ ಫೇಸ್ ಸ್ಮಾರ್ಟ್ ಮೀಟರ್’ ದರ 950ರಿಂದ 4,998ಕ್ಕೆ ಏರಿಕೆ