ಬೆಂಗಳೂರು : ಜಲಜೀವನ್ ಮಿಷನ್ ಯೋಜನೆಯ ಪ್ರತಿ ಕಾಮಗಾರಿಗೆ ಕನಿಷ್ಠ ಒಂದೂವರೆ ಎರಡು ವರ್ಷ ಬೇಕಾಗುತ್ತದೆ. ಆದರೆ ಕಳೆದ ಬಾರಿ ಬರ ಇದ್ದಿದ್ದರಿಂದ ಸಾಕಷ್ಟು ಕಡೆ ನಮಗೆ ಸಂಪೂರ್ಣವಾಗಿ ವೈಜ್ಞಾನಿಕವಾಗಿ ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸುವ ಜವಾಬ್ದಾರಿ ನಮ್ಮದಾಗಿದೆ. ಯೋಜನೆಯಲ್ಲಿ ಯಾವುದೇ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ವಿಧಾನಸಭೆ ಸದಸ್ಯರು ಈಗ ಇದರ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಇದನ್ನು ನಾನೇ ಖುದ್ದಾಗಿ ಪರಿಶೀಲನೆ ನಡೆಸಿ ಸರಿಪಡಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಪ್ರತಿ ಗ್ರಾಮೀಣ ಕುಟುಂಬಕ್ಕೆ ಶುದ್ಧ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡಲಾಗಿದೆ ಎಂದರು.