ಬೆಂಗಳೂರು: 2024-25ನೇ ಸಾಲಿನ ಪಿಯುಸಿ ಪರೀಕ್ಷೆ-1 ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಸಂಸ್ಥೆಯಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿದ್ಯಾರ್ಥಿಗಳಿಗೆ ದಿನಾಂಕ 01-03-2025ರಿಂದ 20-03-2025ರವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ವಿದ್ಯಾರ್ಥಿಗಳಿಗೆ ದಿನಾಂಕ 21-03-2025ರಿಂದ 04-04-2025ರವರೆಗೆ ಪರೀಕ್ಷೆಗಳು ನಡೆಯುತ್ತಿವೆ ಎಂದು ತಿಳಿಸಿದೆ.
ವಿದ್ಯಾರ್ಥಿಗಳು ಪರೀಕ್ಷಾ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂಬುದಾಗಿ ಹೇಳಿದೆ.
2024-25ನೇ ಸಾಲಿನ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಗಮನಕ್ಕೆ. pic.twitter.com/Hjft8MODWq
— BMTC (@BMTC_BENGALURU) March 5, 2025
ಕೇದಾರನಾಥ ಮತ್ತು ಹೇಮಕುಂಡ್ ಸಾಹಿಬ್ ರೋಪ್ ವೇ ಯೋಜನೆಗಳಿಗೆ ಮೋದಿ ಸಂಪುಟ ಅನುಮೋದನೆ
‘ಆರೋಗ್ಯ ವಿಮೆ’ ಖರೀದಿಸುವಾಗ ಈ 7 ಸಾಮಾನ್ಯ ತಪ್ಪುಗಳನ್ನು ತಪ್ಪಿಸಿ | Health Insurance