ಬೆಂಗಳೂರು: ಫ್ಲೈಓವರ್ ಕಾಮಗಾರಿಯ ಕಾರಣದಿಂದಾಗಿ ಇಂದಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟ ಫ್ಲೈಓವರ್ ಬಂದ್ ಮಾಡಲಾಗುತ್ತಿದೆ. ಕಾಮಗಾರಿ ಪೂರ್ಣಗೊಳುವವರೆಗೆ ಇಂದಿನಿಂದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ರಾತ್ರಿ 11ರಿಂದ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗುತ್ತಿದೆ.
ಈ ಬಗ್ಗೆ ಎನ್ ಹೆಚ್ ಎಐ ಮಾಹಿತಿ ನೀಡಲಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಕಾಮಗಾರಿಯ ಕಾರಣದಿಂದಾಗಿ ಇಂದಿನಿಂದ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಫ್ಲೈಓವರ್ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಅಂತ ತಿಳಿಸಿದೆ.
ರಾತ್ರಿ ವೇಳೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧವನ್ನು ಹೇರಲಾಗಿದೆ. ಬೆಂಗಳೂರು ಸಿಲ್ಕ್ ಬೋರ್ಡ್ ನಿಂದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ವರೆಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ವರೆಗೆ ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿರುವುದಾಗಿ ಹೇಳಿದೆ.
ಬೆಳಿಗ್ಗೆ 6 ರಿಂದ ರಾತ್ರಿ 11 ಗಂಟೆಯವರೆಗೆ ಮಾತ್ರವೇ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ರಾತ್ರಿ 11 ರಿಂದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಎನ್ ಹೆಚ್ ಎ ಐ ಆದೇಶಿಸಿದೆ.
ರಾಜ್ಯ ಸರ್ಕಾರದಿಂದ ‘ಗ್ರಾಮ ಆಡಳಿತ ಅಧಿಕಾರಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರವೇ ‘ಲ್ಯಾಪ್ ಟಾಪ್’ ವಿತರಣೆ
SSLC, ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ಸುಗಳಲ್ಲಿ ‘ಉಚಿತ ಸಂಚಾರ’ಕ್ಕೆ ಅವಕಾಶ