ಬೆಂಗಳೂರು: ಜನವರಿಯಲ್ಲಿ ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಫೆಬ್ರವರಿಯಲ್ಲಿ ನಮ್ಮ ಮೆಟ್ರೋ ಪ್ರಯಾಣದ ದರವನ್ನು ಭಾರೀ ಏರಿಕೆ ಮಾಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಶೀಘ್ರವೇ ಆಟೋ ಮೀಟರ್ ದರ ಹೆಚ್ಚಳ ಫಿಕ್ಸ್ ಎಂಬಂತೆ ಆಗಿದೆ.
ಈ ಸಂಬಂಧ ಮಾರ್ಚ್ 12ರಂದು ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಆಟೋ ಮೀಟರ್ ದರ ಹೆಚ್ಚಳದ ಬಗ್ಗೆ ಚರ್ಚಿಸಲು ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಆಟೋ ಮೀಟರ್ ದರ ಎಷ್ಟು ಹೆಚ್ಚಳ ಮಾಡಬೇಕು ಎನ್ನುವ ಬಗ್ಗೆ ಸಂಘಟನೆಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ.
ಮಾರ್ಚ್.12ರ ಸಭೆಯ ನಂತ್ರ ಬೆಂಗಳೂರಲ್ಲಿ ಆಟೋ ಮೀಟರ್ ದರ ಎಷ್ಟು ಹೆಚ್ಚಳವಾಗಲಿದೆ ಎನ್ನುವ ಖಚಿತ ಮಾಹಿತಿ ಹೊರ ಬೀಳಲಿದೆ. ಈ ಮೂಲಕ ಬೆಂಗಳೂರು ಜನತೆಗೆ ಮಾರ್ಚ್ ಎರಡನೇ ವಾರದಲ್ಲಿ ಆಟೋ ಮೀಟರ್ ದರ ಏರಿಕೆ ಫಿಕ್ಸ್ ಆದಂತೆ ಆಗಿದೆ. ಆ ಮೂಲಕ ಆಟೋ ಪ್ರಯಾಣಿಕರಿಗೆ ಬಿಎಂಟಿಸಿ, ನಮ್ಮ ಮೆಟ್ರೋ ದರ ಹೆಚ್ಚಳದ ಬೆನ್ನಲ್ಲೇ ದರ ಹೆಚ್ಚಳದ ಶಾಕ್ ಸಿಗೋದು ಗ್ಯಾರಂಟಿ ಎನ್ನಲಾಗುತ್ತಿದೆ.
SSLC, ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ಸುಗಳಲ್ಲಿ ‘ಉಚಿತ ಸಂಚಾರ’ಕ್ಕೆ ಅವಕಾಶ
BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಜಮೀನು ದಾರಿ’ಗೆ ಹೊಸ ಯೋಜನೆ ಜಾರಿ | WATCH VIDEO