ಬೆಂಗಳೂರು: ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯುವವರಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದೆ. ಈ ಸಂಬಂಧ ಆದೇಶ ಕೂಡ ಮಾಡಿದೆ. ಅದರ ಜೊತೆ ಜೊತೆಗೆ ರಾಜ್ಯದ ಜನತೆಗೆ ಬಿಗ್ ಶಾಕ್ ಎನ್ನುವಂತೆ ಸಿಂಗಲ್ ಫೇಸ್ ಸ್ಮಾರ್ಟ್ ಮೀಟರ್ ದರವನ್ನು ರೂ.950ರಿಂದ ಬರೋಬ್ಬರಿ 4,998ಕ್ಕೆ ಏರಿಕೆ ಮಾಡಿದೆ. ಅಂದರೆ ಸ್ಮಾರ್ಟ್ ಮೀಟರ್ ದರ ಶೇ.400 ರಿಂದ 800ರಷ್ಟು ಏರಿಕೆ ಮಾಡಲಾಗಿದೆ.
ಹೌದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಿಂದ ಹೊಸ ವಿದ್ಯುತ್ ಸಂಪರ್ಕ ಪಡೆಯುವವರು ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಿ ಆದೇಶದ ಬೆನ್ನಲ್ಲೇ ಹೀಗೊಂದು ಶಾಕ್ ನೀಡಲಾಗಿದೆ. ಇದೀಗ ಮೀಟರ್ ದರ ಶೇ.400ರಿಂದ ಶೇ.800ರಷ್ಟು ಏರಿಕೆ ಮಾಡಿ ಹೊಸ ಶಾಕ್ ನೀಡಿದೆ.
ಜನವರಿ 15, 2025ರಿದಂ ಅನ್ವಯವಾಗುವಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ತೆಗೆದುಕೊಳ್ಳುವ ಎಲ್ಲಾ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೂ ಪ್ರೀಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದೆ. ಇದಲ್ಲದೇ ಹೊಸ ಕಾಯಂ ಸಂಪರ್ಕ ಪಡೆಯಲು ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದ್ದು, ಪ್ರಿಪೇಯ್ಡ್ ಅಥವಾ ಪೋಸ್ಟ್ ಪೇಯ್ಡ್ ಎಂಬ ಆಯ್ಕೆಯನ್ನು ನೀಡಲಾಗಿದೆ.
ಎಸ್ಪಿ-2 ಸ್ಮಾರ್ಟ್ ಮೀಟರ್ ದರವನ್ನು ರೂ.2400ರಿಂದ 9000ಕ್ಕೆ, ಎಸ್ಪಿ-3 ಫೇಸ್ ದರವನ್ನು ರೂ.2500ರಿಂದ 28,000ಕ್ಕೆ ಏರಿಕೆ ಮಾಡಲಾಗಿದೆ. ಇದು ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಜಾರಿಗೊಳ್ಳಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಿಡಿ
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, “ಸರ್ಕಾರವೊಂದು ಆರ್ಥಿಕ ದಿವಾಳಿಯಾದರೆ ಮಾತ್ರ ಇಂತಹ ದಿಗಿಲು ಹುಟ್ಟಿಸುವ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯ” ಬೆಸ್ಕಾಂ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಶೇ 400-800 ರಷ್ಟು ದರ ಏರಿಕೆ ಮಾಡಿರುವ ನಿರ್ಧಾರ ಪ್ರಕಟಿಸಿರುವುದು ಕೇವಲ ವಿದ್ಯುತ್ ಶಾಕ್ ಅಲ್ಲ, ಜನ ಸುಲಿಗೆಯ ಲೂಟಿಕೋರತನವಾಗಿದೆ ಎಂಬುದಾಗಿ ಕಿಡಿಕಿಡಿಯಾಗಿದ್ದಾರೆ.
ಬೆಸ್ಕಾಂ ಜಾರಿಗೆ ತಂದಿರುವ ದರವನ್ನೇ ರಾಜ್ಯದ ಇತರ ಎಸ್ಕಾಂ ಗಳ ವ್ಯಾಪ್ತಿಯಲ್ಲೂ ಜಾರಿ ಮಾಡುವುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಹೇಳಿದ್ದಾರೆ. ಈಗಾಗಲೇ ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ಒದಗಿಸಲಾಗಿರುವ ವಿದ್ಯುತ್ ಸೇವೆಗೆ ಸರ್ಕಾರ ಹಣ ಒದಗಿಸದಿದ್ದರೆ ಹಣವನ್ನು ಫಲಾನುಭವಿಗಳಿಂದ ವಸೂಲಿ ಮಾಡುವುದಾಗಿ ಹೇಳಿ ಎಸ್ಕಾಂ ಅಧಿಕಾರಿಗಳು ಸರ್ವಸನ್ನದ್ಧರಾಗಿ ನಿಂತಿದ್ದಾರೆ, ಇದರ ನಡುವೆಯೇ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ ಅವೈಜ್ಞಾನಿಕವಾಗಿ ಶೇ 400 ರಿಂದ 800 ರಷ್ಟು ದರ ಏರಿಕೆ ಮಾಡಿರುವ ಕ್ರಮ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕಲ್ಪಿಸಿಕೊಳ್ಳಲೂ ಸಾಧ್ಯವಾಗದ ತುಘಲಕ್ ನಿರ್ಧಾರವಾಗಿದೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸರ್ಕಾರದ ಆರ್ಥಿಕ ಸ್ಥಿತಿ ದಿವಾಳಿಯಾಗಿರುವುದರ ಸ್ಪಷ್ಟ ಸೂಚನೆ ಇಂತಹ ಜನವಿರೋಧಿ ಆರ್ಥಿಕ ನಿರ್ಧಾರಗಳಿಂದ ವ್ಯಕ್ತವಾಗುತ್ತಿದೆ. ಸ್ಮಾರ್ಟ್ ಮೀಟರ್ ದರದ ಹೇರಿಕೆಯನ್ನು ಈ ಹಿಂದಿನಂತೆ ನಿಗದಿಪಡಿಸದೇ ಹೋದರೆ ಜನರ ಆಕ್ರೋಶ ಎದುರಿಸಲು ಕಾಂಗ್ರೆಸ್ ಸರ್ಕಾರ ಸಿದ್ಧವಾಗಲಿ ಅಂತ ಹೇಳಿದ್ದಾರೆ.
“ಸರ್ಕಾರವೊಂದು ಆರ್ಥಿಕ ದಿವಾಳಿಯಾದರೆ ಮಾತ್ರ ಇಂತಹ ದಿಗಿಲು ಹುಟ್ಟಿಸುವ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯ”
ಬೆಸ್ಕಾಂ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಶೇ 400-800 ರಷ್ಟು ದರ ಏರಿಕೆ ಮಾಡಿರುವ ನಿರ್ಧಾರ ಪ್ರಕಟಿಸಿರುವುದು ಕೇವಲ ವಿದ್ಯುತ್ ಶಾಕ್ ಅಲ್ಲ, ಜನ ಸುಲಿಗೆಯ ಲೂಟಿಕೋರತನವಾಗಿದೆ.… pic.twitter.com/5Apct6cNgI
— Vijayendra Yediyurappa (@BYVijayendra) March 5, 2025
BREAKING NEWS: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಬಿಗ್ ರಿಲೀಫ್: ಅರಣ್ಯ ಭೂಮಿ ಒತ್ತುವರಿ ಪ್ರಕರಣದ ಅರ್ಜಿ ವಜಾ
ವಿಶ್ವದ ಅತಿ ಉದ್ದದ ರೋಪ್ ವೇ ಕೇದಾರನಾಥದಲ್ಲಿ ನಿರ್ಮಾಣ: 4000 ಕೋಟಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ