ಬೆಂಗಳೂರು : ಈಗಾಗಲೇ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಿದ್ದು, ಮಾರ್ಚ್ 7 ರ ನಾಳೆ ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 16 ನೇ ಬಜೆಟ್ ಮಂಡಿಸಲಿದ್ದಾರೆ.
ಮಾ.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದು, ಗ್ಯಾರಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ.
ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್ ಆಗಿತ್ತು. ಸಿದ್ದರಾಮಯ್ಯ ಅವರ 16ನೇ ಬಜೆಟ್ ಹಲವು ವಿಶೇಷತೆಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.ಗಳನ್ನು ದಾಟಲಿದೆ ಎಂದು ಹೇಳಲಾಗುತ್ತಿದೆ.