ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ತೆರಿಗೆ ಪಾವತಿಸಿ ಬಿ-ಖಾತಾ ಪಡೆದುಕೊಳ್ಳಬೇಕು. ಸರ್ಕಾರಿ ಹಾಗೂ ಸರ್ಕಾರದ ಅಧೀನ ಇಲಾಖೆ, ನಿಗಮ, ಮಂಡಳಿಗಳ ಜಾಗಗಳನ್ನು ಹೊರತುಪಡಿಸಿ, ಅನಧಿಕೃತ ಬಡಾವಣೆ, ಭೂ ಪರಿವರ್ತನೆ ಹೊಂದದೆ ಸ್ವಂತವಾಗಿ ತಮ್ಮದೇ ಮಾಲೀಕತ್ವ ಹೊಂದಿದ ನಿವೇಶನ/ಜಾಗಗಳಲ್ಲಿ ನಿರ್ಮಿಸಿಕೊಂಡಿರುವ ಅನಧಿಕೃತ ನಿವೇಶನ/ಕಟ್ಟಡಗಳನ್ನು 2024 ಸೆ.10 ರ ಒಳಗಾಗಿ ನೋಂದಾವಣೆ ಮೂಲಕ ಖರೀದಿ ಮಾಡಿದಂತಹ ಆಸ್ತಿಗಳನ್ನು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಬಿ-ಖಾತೆ ಪಡೆಯಬಹುದಾಗಿದೆ.
ಎ-ಖಾತಾ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು
1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ ವಿಭಾಗ * ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ಮಂಜೂರಾತಿ ಪತ್ರಗಳು ಕಂದಾಯ ಇಲಾಖೆಯಿಂದ 94 ಸಿ ಸಿ ಅಡಿ ನೀಡಲಾದ ಹಕ್ಕು ಪತ್ರ.
2. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ಧೃಡೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ
3. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ
4. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ
5. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ
6. ಮಾಲೀಕರ ಗುರುತಿನ ದಾಖಲೆ ಪ್ರತಿ.
ಬಿ-ಖಾತಾ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು
1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿನಾಂಕ: 10-09-2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ ವಿಭಾಗ ಪತ್ರಗಳು/ ಹಕ್ಕು ಖುಲಾಸೆ ಪತ್ರಗಳು.
2. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.
3. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ
4. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ
5. ಮಾಲೀಕರ ಗುರುತಿನ ದಾಖಲೆ ಪ್ರತಿ.
ಈ ಮೇಲಿನ ದಾಖಲೆಗಳನ್ನು ಈ ಪ್ರಕಟಣೆ ದಿನಾಂಕದಿಂದ 3 ತಿಂಗಳೊಳಗೆ ಸಲ್ಲಿಸಿ 2-ಖಾತೆಯನ್ನು ಪಡೆಯುವುದು.