ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ರೋಜ್‍ಗಾರ್-ಉದ್ಯೋಗ ಮೇಳವನ್ನು ಮಾರ್ಚ್ 9, 2025 ರಂದು ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಉದ್ಯೋಗಮೇಳದ ಉದ್ಘಾಟನಾ ಸಮಾರಂಭವನ್ನು ಡಾ.ಅಣ್ಣಾಜಿರಾವ ಶಿರೂರು (ಸೃಜನಾ) ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿ ವಹಿಸುವರು.
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್‍ಪೀರ್ ಎಸ್.ಖಾದ್ರಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ ನಾಯಕ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಜಲಮಂಡಳಿಯ ಅಧ್ಯಕ್ಷರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಾಮ್ ಪ್ರಸಾತ್ ಮನೋಹರ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಡಾ.ಏಕರೂಪ್ ಕೌರ್, ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕಿ ಶ್ರೀವಿದ್ಯಾ ಪಿ.ಐ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಟೀಲ ಭುವನೇಶ ದೇವಿದಾಸ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಗೋಪಾಲ ಎಂ.ಬ್ಯಾಕೋಡ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಗಾಳಿ ಹಾಗೂ ಕರ್ನಾಟಕ ಕಾಲೇಜು ಪ್ರಾಚಾರ್ಯ ಡಾ. ಡಿ.ಬಿ.ಕರಡೋಣಿ ಅವರು ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.