ಬೆಂಗಳೂರು : ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕದ ವ್ಯಾಪ್ತಿಯಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.