ಬೆಂಗಳೂರು : 60 ಎಕರೆ ಅರಣ್ಯ ಪ್ರದೇಶವನ್ನು ಹೊತ್ತುವರಿ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು,ಅರಣ್ಯ ಸಂರಕ್ಷಣಾಧಿಕಾರಿ ನೋಟಿಸ್ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೈ ಕೋರ್ಟ್ ಏಕ ಸದಸ್ಯ ಪೀಠದಲ್ಲಿ ಇಂದು ರಮೇಶ್ ಕುಮಾರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಯಿತು. ಮಾರ್ಚ್ 10 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಇದೆ ವೇಳೆ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿತು.
ಹೈಕೋರ್ಟ್ ನ್ಯಾ ಎಂ. ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ವೇಳೆ 60ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪವಿದೆ. ಜಮೀನಿನ ಸ್ವರೂಪ ಬದಲಿಸಿ ಪೋಡಿ ಮಾಡಿಸುತ್ತಿದ್ದಾರೆ ಎಂದು ಸರ್ಕಾರದ ವಾದವಾಗಿದ್ದು, ಇಂದಿನ ಎರಡು ಸರ್ವೆಗಳ ವರದಿ ಅರಣ್ಯ ಅಧಿಕಾರಿಗಳ ವಿರುದ್ಧವಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪರ ವಕೀಲರು ವಾದ ಮಂಡಿಸಿದರು. ಬಳಿಕ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 10ಕ್ಕೆ ನಿಗದಿಪಡಿಸಿ ಆದೇಶಿಸಿತು.