ತುಮಕೂರು : ಹಾಸ್ಟೆಲಲ್ಲಿ ವಿದ್ಯಾರ್ಥಿನಿಯೋರ್ವಳು ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸಿದ್ದಾರ್ಥ ಕಾಲೇಜಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಹೌದು ಸಿದ್ದಾರ್ಥ್ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು ವೇಲ್ ನಿಂದ ನೇಣು ಬಿಗಿದುಕೊಂಡು ದೀಪಿಕಾ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ಹಾಸ್ಟೆಲ್ ಮಹಡಿಯ ಮೇಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ದೀಪಿಕಾ ಶಿರಾ ತಾಲೂಕಿನ ಗುಂಡೆಗೌಡನಪಾಳ್ಯ ನಿವಾಸಿ ಎಂದು ತಿಳಿದು ಬಂದಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.