ಬೆಂಗಳೂರು : ಅಪಾಯಕಾರಿ ವ್ಹೀಲಿಂಗ್ ಮಾಡಿ ಚಾಕು, ಚೂರಿ ತೋರಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದವರ ವಿರುದ್ಧ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಬಂಧಿಸಲಾಗುತ್ತಿದೆ.ಅಲ್ಲದೇ ಇನ್ಮುಂದೆ ಅಪಾಯಕಾರಿ ವ್ಹೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 1342 ಪ್ರಕರಣಗಳು ದಾಖಲಾಗಿದ್ದು, 1046 ಜನರನ್ನು ಬಂಧಿಸಲಾಗಿದೆ ವ್ಹೀಲಿಂಗ್ ಮಾಡುವುದಲ್ಲದೆ ಚಾಕು, ಚೂರಿ ಹಾಗೂ ಲಾಂಗ್ ಹಿಡಿದುಕೊಂಡು ಓಡಾಡಿ ಸಮಾಜದ ಸ್ವಾಸ್ಥ್ಯ ಕದಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದೆಲ್ಲೆಡೆ ದಾಖಲಾದ ಒಟ್ಟು ವ್ಹೀಲಿಂಗ್ ಪ್ರಕರಣಗಳಲ್ಲಿ ಬೆಂಗಳೂರು ನಗರದಲ್ಲಿ 893 ಪ್ರಕರಣ ದಾಖಲಾಗಿದ್ದು, 788 ಮಂದಿಯನ್ನು ಬಂಧಿಸಲಾಗಿದೆ. ರಾಜ್ಯದ ಇತರೆಡೆ 449 ಪ್ರಕರಣ ದಾಖಲಾಗಿದ್ದು, 258 ಆರೋಪಿಗಳನ್ನು ಅರೆಸ್ಟ್ ಮಾಡಿದ್ದೇವೆ ಎಂದು ಪ್ರಶೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಸ್.ಎಲ್.ಬೋಜೇಗೌಡ ಪ್ರಶ್ನೆಗೆ ಸಚಿವರು ಮಾಹಿತಿ ನೀಡಿದರು.