ಲಕ್ನೋ: ಪಾಕ್ ಐಎಸ್ಐ ಜೊತೆಗೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರನೊಬ್ಬ ಮಹಾ ಕುಂಭಮೇಳದಲ್ಲಿ ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದನು ಎಂಬುದಾಗಿ ತಿಳಿದು ಬಂದಿದೆ. ಇಂತಹ ಖಲಿಸ್ತಾನಿ ಉಗ್ರನನ್ನು ಬಂಧಿಸಲಾಗಿದೆ.
ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದಂತ ಐಎಸ್ಐ ಜೊತೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರನನ್ನು ಮಸಿಹ್ ಎಂಬುದಾಗಿ ತಿಳಿದು ಬಂದಿದೆ. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಮಹಾ ಕುಂಭಮೇಳದಲ್ಲಿ ಕೃತ್ಯ ಎಸಗಲು ಮುಂದಾಗಿದ್ದ ಎನ್ನಲಾಗುತ್ತಿದೆ.
ಬಂಧಿತ ಖಲಿಸ್ತಾನಿ ಉಗ್ರ ಪ್ರಯಾಗ್ ರಾಜ್ ಜಿಲ್ಲೆಯಲ್ಲಿನ ಮಹಾ ಕುಂಭದ ಸಮಯದಲ್ಲಿ ದಾಳಿ ನಡೆಸಿ, ನಂತ್ರ ಪೋರ್ಚುಗಲ್ ಗೆ ಪಲಾಯಣ ಮಾಡುವಂತ ಉದ್ದೇಶ ಹೊಂದಿದ್ದನು ಎಂಬುದಾಗಿ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಮಹಾ ಕುಂಭಮೇಳದ ಮೇಲೆ ದಾಳಿ ನಡೆಸಿ, ದುಷ್ ಕೃತ್ಯ ನಡೆಸಲು ಸಂಚು ರೂಪಿಸಿದ್ದಂತ ಆರೋಪಿಯನ್ನು ಬಂಧಿಸಿ, ಆತನ ದಾಳಿಯನ್ನು ವಿಫಲಗೊಳಿಸಲಾಗಿದೆ. ಈತ ಮಹಾ ಕುಂಭದ ಸಿದ್ಧತೆಗಳ ಸಮಯದಲ್ಲಿ ಲಕ್ನೋ ಮತ್ತು ಕಾನ್ಪುರಕ್ಕೆ ಭೇಟಿ ನೀಡಿದ್ದನು ಎಂಬುದಾಗಿ ಹೇಳಿದ್ದಾರೆ.
ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ‘ಎ, ಬಿ-ಖಾತಾ’ ಅಂದ್ರೆ ಏನು? ಪಡೆಯೋದು ಹೇಗೆ.?
‘PWD ಚೀಫ್ ಇಂಜಿನಿಯರ್’ ಮನೆ ಮೇಲೆ ಲೋಕಾಯುಕ್ತ ದಾಳಿ: ‘ಚಿನ್ನಾಭರಣ’ ಕಂಡು ಪೊಲೀಸರೇ ಶಾಕ್ | Lokayukta Raid