ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಮೀನಿನಲ್ಲಿ ಇರುವಂತಹ ಕೃಷಿ ಹೊಂಡಕ್ಕೆ ಈಜಲು ತೆರಳಿದ್ದ ಇಬ್ಬರು ವ್ಯಕ್ತಿಗಳು ಮುಳುಗಿ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನೆಲ್ಲಿಕಟ್ಟೆ ಎಂಬ ಗ್ರಾಮದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ನೆಲ್ಲಿಕಟ್ಟೆ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋಗಿ ಇಬ್ಬರು ವ್ಯಕ್ತಿಗಳು ಸಾವನಪ್ಪಿದ್ದಾರೆ. ಮೃತರನ್ನು ನಾಗರಾಜು (35) ಶ್ರೀನಿವಾಸ (40) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.ಗ್ರಾಮದ ಅಜ್ಜಪ್ಪ ಎಂಬುವವರ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ. ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.