ಬೆಂಗಳೂರು: ಶಾಲಾ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಕರಿಗೆ ಚುನಾವಣೆ ಸೇರಿ ಅನ್ಯ ಕಾರ್ಯಗಳಿಗೆ ನಿಯೋಜನೆ ಮಾಡಬಾರದು ಎಂಬುದಾಗಿ ಶಾಲಾ ಶಿಕ್ಷಣ ಸಚಿವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದ್ದಾರೆ.
ಗುರುವಾರದಂದು ವಿಧಾನಪರಿಷತ್ತಿನಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಕೇಳಿದ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರಿಸಿದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಪ್ರಾಥಮಿಕ ಹಂತದಲ್ಲಿ ಮಕ್ಕಳಲ್ಲಿ ಪರಿಣಾಮಕಾರಿ ಕಲಿಕೆಗೆ ಒತ್ತು ನೀಡಬೇಕಾದರೇ ಶಿಕ್ಷಕರಿಗೆ ಬೇರಿ ಕಾರ್ಯಗಳಿಗೆ ನೇಮಿಸಬಾರದು ಎಂದರು.
ಸಭಾಪತಿಗಳ ಮಾತಿಗೆ ಒಪ್ಪಿದಂತ ಸಚಿವ ಮಧು ಬಂಗಾರಪ್ಪ, ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ಇಲಾಖೆಯಿಂದ ಹಲವು ಕ್ರಮ ಕೈಗೊಳ್ಳಲಾಗಿದೆ. ನಿಮ್ಮ ಮಾತಿಗೆ ಸಹಮತವಿದ್ದು, ಶಿಕ್ಷಕರಿಗೆ ಅನ್ಯ ಕಾರ್ಯ ನೀಡದಂತೆ ಸೂಚಿಸುವುದಾಗಿ ಸದನಕ್ಕೆ ತಿಳಿಸಿದರು.
Good News: ಮುಂದಿನ ವರ್ಷ ‘ಮಂಗನ ಕಾಯಿಲೆ’ಗೆ ಹೊಸ ಲಸಿಕೆ: ಸಚಿವ ದಿನೇಶ್ ಗುಂಡೂರಾವ್