ಬೆಂಗಳೂರು: ಮಂಗನ ಕಾಯಿಲೆ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇರುವುದಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಿ, ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಇದರಿಂದ ಅನೇಕ ರೋಗಿಗಳು ಯಾವುದೇ ತೊಂದರೆಗಳಿಲ್ಲದೇ ಮಂಗನ ಕಾಯಿಲೆ ಸೋಂಕಿನಿಂದ ಚೇತರಿಸಿಕೊಳ್ಳತ್ತಾರೆ. ಈ ಖಾಯಿಲೆಯು ಬೇಸಿಗೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಮಂಗನ ಕಾಯಿಲೆಯಿಂದ ಸಾವುಗಳು ಸಂಭವಿಸದಂತೆ ಮುಂಜಾಗ್ರತ ಕ್ರಮಗಳನ್ನು ವಹಿಸಲಾಗಿದೆ. ಈ ರೋಗಕ್ಕೆ ಯಾವುದೇ ಲಸಿಕೆ ಇರುವುದಿಲ್ಲ. ಈ ಹಿಂದೆ ಇದ್ದ ಲಸಿಕೆ ಕ್ಷಮತೆ ಕಳೆದುಕೊಂಡಿದೆ. ಈಗಾಗಲೇ ಐಸಿಎಂಆರ್ ಜೊತೆ ಚರ್ಚೆ ಮಾಡಿ ನಿರಂತರ ಸಂಪರ್ಕದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಹಾಗೂ ಲಸಿಕಾಗೆ ಸಂಶೋಧನೆ ಕಾರ್ಯ ನಡಿಯುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಸದಸ್ಯರಾದ ಅರಗ ಜ್ಞಾನೇಂದ್ರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ 674 ಖಚಿತ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಇಲ್ಲಿಯವರೆಗೆ ಯಾವುದೇ ಖಚಿತ ಡೆಂಗ್ಯೂ ಮರಣ ಪ್ರಕರಣಗಳು ವರದಿಯಾಗಿರುವುದಿಲ್ಲ. ಪ್ರಸಕ್ತ ಸಾಲಿನಲ್ಲಿ ಮಂಗನ ಕಾಯಿಲೆ ಸೊಂಕಿತ ಓರ್ವ ಮಹಿಳೆ ಮೃತಪಟ್ಟಿದ್ದು, ಮಹಿಳೆ ಅನ್‍ಕಂಟ್ರೋಲ್ಡ್ ಬಿ.ಪಿ ಮತ್ತು ಮಧುಮೇಹ ಜೊತೆಗೆ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ವರದಿಯಿಂದ ತಿಳಿದುಬಂದಿರುತ್ತದೆ.
ಮುಂದಿನ ವರ್ಷದೊಳಗೆ ಮಂಗನ ಕಾಯಿಲೆಗೆ ಲಸಿಕೆ ಕಾರ್ಯ ಸಂಪೂರ್ಣವಾಗಲಿದೆ. ಮಂಗನ ಕಾಯಿಲೆ ಪೀಡಿತ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲಾ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಡಲಾಗಿದೆ ಅಲ್ಲದೇ, ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಮೊಬೈಲ್ ಯುನಿಟ್ ಗಳನ್ನು ನೀಡಲಾಗುವುದು. ಡಾಕ್ಟರ್ ಗಳ ಕೊರತೆಯನ್ನು ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಸಚಿವರು ವಿಧಾನಸಭೆಯಲ್ಲಿ ತಿಳಿಸಿದರು.
BIG NEWS: ‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಭಯ ರಹಿತವಾಗಿ ಪರೀಕ್ಷೆ ಬರೆಯಲು ‘ಸಹಾಯವಾಣಿ’ ಆರಂಭ
ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ