ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಎನ್ನುವಂತೆ ಆಯ್ಕೆಗೆ 25 ರಿಂದ 45 ವರ್ಷಗಳ ವಯೋಮಿತಿಯನ್ನು, ನಿವೃತ್ತಿಗೆ 60 ವರ್ಷಗಳ ವಯೋಮಿತಿಯನ್ನು ನಿಗದಿ ಪಡಿಸಿ ಆದೇಶ ಹೊರಡಿಸಿದೆ.
ಈ ಸಂಬಂಧ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಆದೇಶ ಮಾಡಿದ್ದಾರೆ. ಅದರಲ್ಲಿ ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದಂತ ಸಾಮಾಜಿ ಆರೋಗ್ಯ ಕಾರ್ಯಕರ್ತೆಯರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿರುವಂತ ಆಶಾ ಕಾರ್ಯಕರ್ತೆಯರು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯಾಧ್ಯಂತ ಜಿಲ್ಲಾವಾರು ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದಿದ್ದಾರೆ.
ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಹಾಲಿ ಇರುವ ಜನಸಂಖ್ಯೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ತಂತ್ರಜ್ಞಾನ ಇತ್ಯಾದಿಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಗೆ 25-45 ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಸದರಿ ನಿವೃತ್ತಿಯ ವಯೋಮಿತಿಯನ್ನು 60 ವರ್ಷಕ್ಕೆ ಸೀಮಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ‘ಅನಧಿಕೃತ ಆಸ್ತಿ’ಗಳಿಗೆ ‘ಬಿ-ಖಾತಾ’: ರಾಜ್ಯ ಸರ್ಕಾರ ಚಿಂತನೆ
ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ