ಬೆಂಗಳೂರು: ಇಂದು ಬೆಳಗ್ಗೆ 10.15ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇಂತಹ ಬಜೆಟ್ ಪ್ರತಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಣಕಾಸು ಇಲಾಖೆಯ ಅಧಿಕಾರಿಗಳು ಹಸ್ತಾಂತರಿಸಿದರು.
ಇಂದು ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದಂತ ಹಣಕಾಸು ಇಲಾಖೆಯ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯಗೆ 2025-26ನೇ ಸಾಲಿನ ರಾಜ್ಯ ಬಜೆಟ್ ಪ್ರತಿಗಳ್ನು ಹಸ್ತಾಂತರಿಸಿದರು.
ಇದೇ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಆರ್ಥಿಕ ಇಲಾಖೆಯ ಸಲಹೆಗಾರ ರಾಯರೆಡ್ಡಿ ಅವರ ನೇತೃತ್ವದಲ್ಲಿ ಹಸ್ತಾಂತರಿಸಿದಂತ ಬಜೆಟ್ ಪ್ರತಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು.
ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾವೇರಿ ನಿವಾಸಕ್ಕೆ ಬಜೆಟ್ ಪ್ರತಿಗಳನ್ನು ತಂದಂತ ಆರ್ಥಿಕ ಇಲಾಖೆಯ ಅಧಿಕಾರಿಗಳ ತಂಡವು, ಸಿಎಂ ಸಿದ್ಧರಾಮಯ್ಯಗೆ ಹಸ್ತಾಂತರಿಸಿತು. ಈ ಬಜೆಟ್ ಅನ್ನೇ ಸಿಎಂ ಸಿದ್ಧರಾಮಯ್ಯ ಅವರು ಇಂದು ಬೆಳಗ್ಗೆ 10.15ಕ್ಕೆ ವಿಧಾನಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.
ಇಂದು ‘ರಾಜ್ಯ ಬಜೆಟ್’ ಮಂಡನೆ: ಬಜೆಟ್‌ಗೂ ಮುನ್ನ ‘ಬಿಜೆಪಿ-ಜೆಡಿಎಸ್ ಪ್ರತಿಭಟನೆ’
ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ