ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸುತ್ತಿದ್ದು, ರಾಜ್ಯಾದ್ಯಂತ ಗರ್ಭಕಂಠದ ಕ್ಯಾನ್ಸರ್ ತಡೆಗೆ ̆ 14 ವರ್ಷದ ಹೆಣ್ಣುಮಕ್ಕಳಗಿಎ HPV ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.
2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೊಷಿಸಿದ್ದಾರೆ. ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು. ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.
ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್‌ರ್ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗುವುದು. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.