Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 9:08 AM

ಉದ್ಯೋಗವಾರ್ತೆ : ಭಾರತೀಯ ರೈಲ್ವೆಯಲ್ಲಿ `11,127’ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

17/03/2026 9:03 AM

ವ್ಯಾಯಾಮವಿಲ್ಲದ ಜೀವನಶೈಲಿ ತಂದಿಟ್ಟ ಆಪತ್ತು; 20ರ ಹರೆಯದ ಯುವಕನ ಹೃದಯ ಬಡಿತ ನಿಮಿಷಕ್ಕೆ 110ಕ್ಕೆ ಏರಿಕೆ!

17/03/2026 9:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : `CM ಸಿದ್ದರಾಮಯ್ಯ’ ಮಂಡಿಸಿದ ಬಜೆಟ್ ನಲ್ಲಿ `ಶಿಕ್ಷಣ ಇಲಾಖೆ’ಗೆ ಸಿಕ್ಕ ಕೊಡುಗೆಗಳೇನು? ಇಲ್ಲಿದೆ ಮಾಹಿತಿ
KARNATAKA

BUDGET BREAKING : `CM ಸಿದ್ದರಾಮಯ್ಯ’ ಮಂಡಿಸಿದ ಬಜೆಟ್ ನಲ್ಲಿ `ಶಿಕ್ಷಣ ಇಲಾಖೆ’ಗೆ ಸಿಕ್ಕ ಕೊಡುಗೆಗಳೇನು? ಇಲ್ಲಿದೆ ಮಾಹಿತಿ

By kannadanewsnow5707/03/2025 12:40 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸಿದ್ದು, ಶಿಕ್ಷಣ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಶಾಲಾ ಶಿಕ್ಷಣ

105. ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್

ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ವಿಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.

106. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು.

107. ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು.

108. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು.

109. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.

110. ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.

III. LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು:

i) ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ພວ 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5.000 ಶಾಲೆಗಳಿಗೆ ವಿಸ್ತರಿಸಲಾಗುವುದು.

ii) ‘ಕಲಿಕಾ ಚಿಲುಮೆ’ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.

iii) ‘ಗಣಿತ ಗಣಕ’ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದು. ಮೂಲಕ

iv) ‘ಓದು ಕರ್ನಾಟಕ’ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.

v) ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ

ಹೆಚ್ಚಿಸುವ ‘ಮರುಸಿಂಚನ’ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.

vi) ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ ‘ಕಲಿಕಾದೀಪ’ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಿಸುವುದು.

vii) ‘ಜ್ಞಾನಸೇತು’ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್ ಅಕಾಡೆಮಿ ಸಹಯೋಗದಲ್ಲಿ ಯೋಜನೆ ರೂಪಿಸಲಾಗುವುದು. ರಾಜ್ಯದ 5,000 ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.

viii) ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆ ಪರಿಚಯಿಸಲು ಆಗಸ್ತ್ರ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ICT ಸೌಲಭ್ಯವಿರುವ ಆಯ್ದ 63 ಶಾಲೆಗಳನ್ನು ಹಬ್

ಸಹಾಯ 2025-26

ಗಳೆಂದು ಪರಿಗಣಿಸಿ 756 ಸ್ಟೋಕ್ ಶಾಲೆಗಳಿಗೆ ಅನುಕೂಲ ಕಲ್ಪಿಸುವುದು.

ix) ‘ವಿದ್ಯಾವಿಜೇತ’ ಕಾರ್ಯಕ್ರಮದಡಿ ಪೂರ್ವ ADFO ಪದವಿ យកជ 25,000 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿ ನೀಡಲಾಗಿದ್ದು, ಸದರಿ ಕಾರ್ಯಕ್ರಮವನ್ನು ಮುಂದುವರೆಸಲು 5 ಕೋಟಿ ರೂ. ಒದಗಿಸಲಾಗುವುದು.

112. ‘2000’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.

113. ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು.

114. ರಾಜ್ಯದ 2,710 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈಗಾಗಲೇ ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನೂ 500 ಶಾಲೆಗಳಿಗೆ ಈ ಸೌಲಭ್ಯ ವಿಸ್ತರಿಸಲಾಗುವುದು.

115. ಪ್ರೌಢಶಾಲಾ / ಪದವಿ ಪೂರ್ವ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು Skill at School ಕಾರ್ಯಕ್ರಮ ರೂಪಿಸಲಾಗಿದೆ. ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡಲಾಗುವುದು.

116. ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ రాయగలిగి 725 ఓ ರೂ. ಹಾಗೂ ಆಗತ್ಯ ಪೀಠೋಪಕರಣಗಳನ್ನು ಒದಗಿಸಲು 50 ಕೋಟಿ ರೂ. ನೀಡಲಾಗಿದೆ.

117. ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು 46 ಕೋಟಿ ರೂ. ವೆಚ್ಚ ಮಾಡಲಾಗುವುದು.

118. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಆಡಿ 200 ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು.

119. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮುಂದುವರೆದು, ಇಲಾಖೆಯಲ್ಲಿ ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.

120, ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ ಸೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.

ಉನ್ನತ ಶಿಕ್ಷಣ

121. ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ o (Centre of Excellence) ដ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

122. ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್ シロア ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಪಡಿಸಲಾಗುವುದು. ಕಾಲೇಜುಗಳನ್ನಾಗಿ

123. ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು.

124. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.

125. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.

126. ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು. ಹಾಗೂ

127. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ ರೂಪಿಸಲಾಗಿದೆ.

128. ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ‘Professor of Practice ರನ್ನಾಗಿ ಉದ್ದೇಶಿಸಲಾಗಿದೆ. ನೇಮಿಸಲು

129. ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.

130. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

BUDGET BREAKING: What are the contributions to the `Education Department' in the budget presented by `CM Siddaramaiah'? Here is the information
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 9:08 AM1 Min Read

ALERT : ಫ್ರಿಡ್ಜ್ ನಲ್ಲಿಟ್ಟ `ಪ್ಲಾಸ್ಟಿಕ್’ ಬಾಟಲಿಗಳಲ್ಲಿ ನೀರು ಕುಡಿಯುತ್ತಿರುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು ! 

17/03/2026 9:00 AM1 Min Read

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 8:44 AM1 Min Read
Recent News

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 9:08 AM

ಉದ್ಯೋಗವಾರ್ತೆ : ಭಾರತೀಯ ರೈಲ್ವೆಯಲ್ಲಿ `11,127’ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

17/03/2026 9:03 AM

ವ್ಯಾಯಾಮವಿಲ್ಲದ ಜೀವನಶೈಲಿ ತಂದಿಟ್ಟ ಆಪತ್ತು; 20ರ ಹರೆಯದ ಯುವಕನ ಹೃದಯ ಬಡಿತ ನಿಮಿಷಕ್ಕೆ 110ಕ್ಕೆ ಏರಿಕೆ!

17/03/2026 9:02 AM

ALERT : ಫ್ರಿಡ್ಜ್ ನಲ್ಲಿಟ್ಟ `ಪ್ಲಾಸ್ಟಿಕ್’ ಬಾಟಲಿಗಳಲ್ಲಿ ನೀರು ಕುಡಿಯುತ್ತಿರುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು ! 

17/03/2026 9:00 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5717/03/2026 9:08 AM KARNATAKA 1 Min Read

ಬೆಂಗಳೂರು: “ರಕ್ತದಾನ ಮಹಾದಾನ”. ಒಬ್ಬರ ಜೀವ ಉಳಿಸಲು ರಕ್ತದಾನಕ್ಕಿಂತ ಮಿಗಿಲಾದ ಸೇವೆ ಮತ್ತೊಂದಿಲ್ಲ. ಆದರೆ, ರಕ್ತದಾನ ಮಾಡುವಾಗ ಅಥವಾ ರಕ್ತವನ್ನು…

ALERT : ಫ್ರಿಡ್ಜ್ ನಲ್ಲಿಟ್ಟ `ಪ್ಲಾಸ್ಟಿಕ್’ ಬಾಟಲಿಗಳಲ್ಲಿ ನೀರು ಕುಡಿಯುತ್ತಿರುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು ! 

17/03/2026 9:00 AM

ಸಾರ್ವಜನಿಕರೇ ಗಮನಿಸಿ : ಯಾರು ಯಾರಿಗೆ `ರಕ್ತದಾನ’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

17/03/2026 8:44 AM

ALERT : ಅತಿಯಾದ `ಸೋಶಿಯಲ್ ಮೀಡಿಯಾ’ ಬಳಕೆಯಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಆತಂಕ ಮತ್ತು ಕೋಪ !

17/03/2026 8:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.