ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸಿದ್ದು, ಬಿಸಿಯೂಟ ತಯಾರಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಬಿಸಿಯೂಟ ತಯಾರಿಕೆ ಸಿಬ್ಬಂದಿ ಗೌರವಧನ ₹1 ಸಾವಿರ ಹೆಚ್ಚಳ, ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು 4 ಸಾವಿರ ಶಾಲೆಗಳಲ್ಲಿ ದ್ವಿಭಾಷಾ ವಿಭಾಗ ಪ್ರಾರಂಭ, 6 ಶಾಲೆ-ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ₹725 ಕೋಟಿ ಹಾಗೂ ಪೀಠೋಪಕರಣ ಒದಗಿಸಲು ₹50 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲ ಕರ್ನಾಟಕವನ್ನು ಸಶಕ್ತಿ, ಸಮೃದ್ಧಿ, ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಸಲಿದೆ ಎನ್ನುವ ಪೂರ್ಣ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.