ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್. ಹಾಲಿನ ದರ ಏರಿಕೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಲಾಗುವುದು, ಹೆಚ್ಚಳ ಮಾಡಿರುವ ಹಾಲಿನ ಹಣ ರೈತರಿಗೆ ಹೋಗಲಿದೆ. ಅಧಿವೇಶನ ಮುಗಿದ ಬಳಿಕ ಹಾಲಿನ ದರ ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.