ಬೆಂಗಳೂರು : 2015ರಲ್ಲಿ ಮಾಜಿ ಸಚಿವ ಆನಂದ ಸಿಂಗ್ ವಿರುದ್ಧ ದಾಖಲಾಗಿದ್ದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣ ಸಂಬಂಧ, ಇದೀಗ ಮಾಜಿ ಸಚಿವ ಆನಂದ್ ಸಿಂಗ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಾಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದಿರು ಸಾಗಣೆ ಪ್ರಕರಣದಲ್ಲಿ ಆನಂದ್ ಸಿಂಗ್ ಅವರನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶಿಸಿದೆ.
ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದ್ದು, ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಆನಂದ್ ಸಿಂಗ್ ಹಾಗು ಗೋವಾ ಸಚಿವ ರೋಹನ್ ಕೌಂಟೇಗು ಬಿಗ್ ರಿಲೀಫ್ ಸಿಕ್ಕಿದೆ. ಅಕ್ರಮ ಅದಿರು ಸಾಗಣೆ ಪ್ರಕರಣದ ಆರೋಪಿಯಾಗಿದ್ದ ರೋಹನ್ ಕೌಂಟೆ ಅವರಿಗೂ ಕೂಡ ಇದೀಗ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣ ಹಿನ್ನೆಲೆ?
16,976 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಕೆ ಆರೋಪ, ಜೈಸಿಂಗ್ಪುರದ ಬಳಿ SVK ಫ್ಲಾಟ್ನಲ್ಲಿ ಅಕ್ರಮ ಗಣಿಗಾರಿಕೆ ಆರೋಪದಡಿ ಆನಂದ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಕ್ರಮ ಗಣಿಗಾರಿಕೆ ಕುರಿತಂತೆ CVC ವರದಿ ಆಧರಿಸಿ ತನಿಖೆಗೆ ಸುಪ್ರೀಂಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಅದರಂತೆ ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿತ್ತು








