ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ನಟಿ ರನ್ಯಾರಾವ್ ದುಬೈ ನಿಂದ ಬೆಂಗಳೂರಿಗೆ 14 ಕೆಜಿ ಚಿನ್ನ ಅಕ್ರಮವಾಗಿ ಸಾಗಿಸಿದ್ದರು. ಇದೀಗ ಮತ್ತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ 3 ಕೆಜಿ 995 ಗ್ರಾಂ ಚಿನ್ನ ಸಾಗಿಸಿದ್ದು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು 3 ಕೋಟಿ 44 ಲಕ್ಷ ರೂಪಾಯಿ ಮೌಲ್ಯದ 3 ಕೆಜಿ 995 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆm ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ದುಬೈ ನಿಂದ ಪ್ರಯಾಣಿಕನೊಬ್ಬ ಬೆಂಗಳೂರಿಗೆ ಆಗಮಿಸಿದ್ದ ಶರ್ಟ್ ನ ಒಳಭಾಗದಲ್ಲಿ ಚಿನ್ನ ಅಡವಿಟ್ಟುಕೊಂಡು ಪ್ರಯಾಣಿಕ ಬಂದಿದ್ದ. ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.








