ಬೆಂಗಳೂರು : ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕ ಸೇರಿದಂತೆ ಒಟ್ಟು 10,000 ಕ್ಕೂ ಹೆಚ್ಚು ಶಿಕ್ಷಕರ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಇಲಾಖೆಯಲ್ಲಿರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಇನ್ನೂ 5 ಸಾವಿರ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.









