ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ ಬಳಿಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಹೌದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಮೈಸೂರು ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಹಾಕುತ್ತಾರೆ ಎಂದು ನಿರೀಕ್ಷೆಯಿತ್ತು. ಬಿ ರಿಪೋರ್ಟ್ ಹಾಕುತ್ತಾರೆ ಎಂದು ನಮಗೆ ಮೊದಲೇ ಗೊತ್ತಾಗಿತ್ತು.ವಿಶೇಷ ಕೋರ್ಟಿಗೆ ಈಗ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದೇನೆ. ತಕರಾರು ಅರ್ಜಿಯಲ್ಲಿ ಆರೋಪ ಸಾಬೀತಾಗುವಂತಹ ಅಂಶಗಳಿವೆ ಎಂದರು.
ಕೋರ್ಟ್ನಲ್ಲಿ ನನ್ನ ಪರವಾಗಿ ನಾನೆ ವಾದ ಮಂಡಿಸುವೆ. ಕಾನೂನು ಅರಿವು ಇರುವವರು ತಮ್ಮ ಪರವಾಗಿ ತಾವೇ ವಾದ ಮಂಡನೆ ಮಾಡಬಹುದು.ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಸದ್ಯಕ್ಕೆ ಬೆದರಿಕೆ ಆಮಿಷಗಳು ಬರುವುದು ನಿಂತಿದೆ. ಬೆದರಿಕೆ ಸಂಬಂಧಪಟ್ಟ ಪೊಲೀಸರಿಗೆ ದೂರು ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದರು.